ಅಡುಗೆ ಮಾಡುತ್ತಿದ್ದಾಗ ಎಲ್‌ಪಿಜಿ ಸಿಲಿಂಡರ್ ಸ್ಫೋಟ, ಐದು ಮಕ್ಕಳು ಸಾವು

ಬಂಕಾರ : ತಾಯಿ ಅಡುಗೆ ಮಾಡುತ್ತಿದ್ದ ವೇಳೆಯಲ್ಲಿ ಎಲ್‌ಪಿಜಿ ಸಿಲಿಂಡರ್‌ ಸ್ಪೋಟಗೊಂಡು ಐವರು ಮಕ್ಕಳು ಸಜೀವ ಸಹನವಾದ ಘಟನೆ ಬಿಹಾರದ ಬಂಕಾ ಜಿಲ್ಲೆಯ ರಾಜಾವರ ಗ್ರಾಮದಲ್ಲಿ ನಡೆದಿದೆ. ಜಿಲ್ಲಾಡಳಿತ ಉನ್ನತಮಟ್ಟದ ತನಿಖೆಗೆ ಆದೇಶಿಸಿದೆ.
ರಾಜಾವರ ಗ್ರಾಮದ ಛೋಟು ಪಾಸ್ವಾನ್ ಅವರ ಪುತ್ರ ಅಂಕುಶ್ (12 ವರ್ಷ), ನಾಲ್ವರು ಪುತ್ರಿಯರಾದ ಅಂಶು ಕುಮಾರಿ (8 ವರ್ಷ), ಸೀಮಾ ಕುಮಾರಿ (4 ವರ್ಷ), ಶಿವಾನಿ ಕುಮಾರಿ (6 ವರ್ಷ) ಮತ್ತು ಸೋನಿ ಕುಮಾರಿ (3 ವರ್ಷ) ಮೃತ ಮಕ್ಕಳಾಗಿದ್ದಾರೆ. ಅಡುಗೆ ಮನೆಯಲ್ಲಿ ಮಕ್ಕಳ ತಾಯಿ ಅಡುಗೆ ಮಾಡುತ್ತಿದ್ದು, ಪಕ್ಕದಲ್ಲೇ ಮಕ್ಕಳು ಆಟವಾಡುತ್ತಿದ್ದರು. ಇದೇ ವೇಳೆ ತಾಯಿ ಯಾವುದೋ ಕೆಲಸದ ನಿಮಿತ್ತ ಕೊಠಡಿಯಿಂದ ಹೊರಗೆ ಹೋದಾಗ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡಿದೆ. ಐವರು ಮಕ್ಕಳು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ತಾಯಿ ಮನೆಯೊಳಗೆ ಬರುವ ಹೊತ್ತಿಗಾಗಲೇ ಮಕ್ಕಳ ಪ್ರಾಣಪಕ್ಷಿ ಹಾರಿ ಹೋಗಿತ್ತು. ಬೆಂಕಿಯ ತೀವ್ರತೆ ಅಕ್ಕಪಕ್ಕದ ಸ್ಥಳಕ್ಕೂ ವ್ಯಾಪಿಸಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಾಹಿತಿ ತಿಳಿದ ತಕ್ಷಣವೇ ಗ್ರಾಮದ ಜನರು ಸ್ಥಳಕ್ಕೆ ಆಗಮಿಸಿದರು. ಮಕ್ಕಳನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಲಾಯಿತು, ಆದರೆ ಅದಕ್ಕೂ ಮೊದಲು ಐವರೂ ಮೃತಪಟ್ಟಿದ್ದರು. ಇನ್ನಿಬ್ಬರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಹಿತಿ ಪಡೆದ ಬಂಕಾ ಪೊಲೀಸ್ ವರಿಷ್ಠಾಧಿಕಾರಿ ಅರವಿಂದ್ ಕುಮಾರ್ ಗುಪ್ತಾ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಈ ಕುರಿತು ತನಿಖೆಗೆ ಆದೇಶಿಸಲಾಗಿದೆ.
ಸಿಲಿಂಡರ್‌ ಸ್ಪೋಟದ ಕುರಿತು ರಾಜೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವ ಕಾರಣಕ್ಕೆ ಸಿಲಿಂಡರ್‌ ಸ್ಪೋಟಗೊಂಡಿದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

ಪ್ರಮುಖ ಸುದ್ದಿ :-   ಏಪ್ರಿಲ್‌ ತಿಂಗಳಲ್ಲಿ ದಾಖಲೆಯ ಪ್ರಮಾಣದ ಜಿಎಸ್‌ಟಿ ಸಂಗ್ರಹ ; ಕರ್ನಾಟಕಕ್ಕೆ 2ನೇ ಸ್ಥಾನ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement