ಉತ್ತರ ಕನ್ನಡ ಜಿಲ್ಲೆ ಕರಾವಳಿ ಭಾಗದಲ್ಲಿ ಡಿಸೆಂಬರ್‌ 31ರಂದು ಮಾತ್ರ ರಾತ್ರಿ 8ರಿಂದಲೇ ನೈಟ್‌ ಕರ್ಫ್ಯೂ ಜಾರಿ

ಕಾರವಾರ: ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರ ಆದೇಶಿಸಿದ್ದ ರಾತ್ರಿ ಕರ್ಫ್ಯೂಗೆ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಹೊಸ ವರ್ಷದ ಹಿನ್ನೆಲೆಯಲ್ಲಿ ಸಮಯ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬುಧವಾರ ಆದೇಶ ಮಾಡಿದ್ದಾರೆ.
ಈ ಆದೇಶ ಡಿ.೩೧ ಮಾತ್ರ ಸೀಮಿತವಾಗಿದೆ. ಹೊಸ ಆದೇಶದಂತೆ ಡಿ.31ರಂದು ರಾತ್ರಿ 8 ಗಂಟೆಯಿಂದ ಮುಂಜಾನೆ ಐದು ಗಂಟೆ ವರೆಗೆ ನೈಟ್‌ ಕರ್ಫ್ಯೂ ಜಾರಿಯಲ್ಲಿ ಇರಲಿದ್ದು ಮರುದಿನ ಎಂದಿನಂತೆ ರಾತ್ರಿ ಹತ್ತು ಗಂಟೆಯಿಂದ ಬೆಳಿಗ್ಗೆ ೫ರ ವರೆಗೆ ನೈಟ್‌ ಕರ್ಫ್ಯೂ ಪುನಃ ಜಾರಿಗೆ ಬರಲಿದೆ.

ಈ ಆದೇಶ ಕರಾವಳಿ ಭಾಗದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳದ ಕರಾವಳಿ ತೀರಗಳು, ಉದ್ಯಾನವನಗಳಿಗೆ ಅನ್ವಯವಾಗಲಿದೆ. ಕೋವಿಡ್ -೧೯ ರೂಪಾಂತರಿ ‘ಓಮಿಕ್ರಾನ್’ ಹರಡದಂತ ಕಟ್ಟುನಿಟ್ಟಿನ ಕ್ರಮವನ್ನು ಜಿಲ್ಲೆಯಲ್ಲಿ ತಡೆಯಲು ತಡೆಯಲು ಸರ್ಕಾರ ಹೊರಡಿಸಿದ ಮಾರ್ಗಸೂಚಿಯ ಜೊತೆಗೆ ಉತ್ತರ ಕನ್ನಡ ಜಿಲ್ಲೆ ಕರಾವಳಿ ಭಾಗಕ್ಕೆ ಹೆಚ್ಚುವರಿ ಹೊಸ ಮಾರ್ಗಸೂಚಿಗಳನ್ನು ಜಿಲ್ಲಾಧಿಕಾರಿ ಹೊರಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ಸಂಬಂಧಿಸಿದಂತೆ ಹೆಚ್ಚಿನ ಪ್ರವಾಸಿಗರು ಸಮುದ್ರ ತೀರದಲ್ಲಿ, ಸಾರ್ವಜನಿಕ ಉದ್ಯಾನವನಗಳಲ್ಲಿ ಸೇರಿ ಆಚರಿಸುವುದರಿಂದ ಕೋವಿಡ್ -19ರ ರೂಪಾಂತರಿ ವೈರಸ್ ಜಿಲ್ಲೆಯಲ್ಲಿ ಹರಡುವ ಸಾಧ್ಯತೆ ಇರುವುದರಿಂದ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಟ್ಟು ನಿಟ್ಟಾಗಿ ಜಾರಿಗೆ ತರಬೇಕಾಗಿರುವುದರಿಂದ ಜಿಲ್ಲೆಯ ಕರಾವಳಿ ಪ್ರದೇಶದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕುಗಳಲ್ಲಿಯ ಸಮುದ್ರ ತೀರಗಳಲ್ಲಿ ಹಾಗೂ ಸಾರ್ವಜನಿಕ ಉದ್ಯಾನವನಗಳಲ್ಲಿ ಡಿ.31ರಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯ ಬದಲಾಗಿ ಡಿ.31ರ ರಾತ್ರಿ 8ರಿಂದ ಬೆಳಗ್ಗೆ 5 ಗಂಟೆಯೊಳಗೆ ಆದೇಶ ಮಾಡಿದ ಸ್ಥಳದಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರನ್ನು ನಿರ್ಬಂಧಿಸುವ ಬಗ್ಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಹಿತಾಸಕ್ತಿಯ ಕುರಿತು ಆದೇಶ ಹೊರಡಿಸಲಾಗಿದೆ ಎಂದು ತಿಳಿಸಲಾಗಿದೆ.
ಈ ಬಗ್ಗೆ ಪೊಲೀಸ್ ಅಧೀಕ್ಷಕರ ಕೋರಿಕೆಯು ಕೋವಿಡ್ -19ರ ರೂಪಾಂತರಿ ಸಾಂಕ್ರಾಮಿಕ ಸೋಂಕು ಹರಡದಂತೆ ತಡೆಗಟ್ಟುವ ಬಗ್ಗೆ ಡಿ.31ರಂದು ರಾತ್ರಿ 8ರಿಂದ ಮುಂಜಾನೆ 5 ವರೆಗೆ ನಿಷೇಧಾಜ್ಞೆ ವಿಧಿಸುವುದು ಸೂಕ್ತವೆಂದು ಕೋರಿದ್ದರಿಂದ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.
ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತು ನರ‍್ವಹಣಾ ಕಾಯ್ದೆ 2005 ಭಾರತೀಯ ದಂಡ ಸಂಹಿತೆ ಸೆಕ್ಷನ್ 186 ರನ್ವಯ ಹಾಗೂ ಸಾಂಕ್ರಾಮಿಕ ರೋಗ ಹಾಯ್ದೆ2020ರ ವಿಭಾಗ 4, 5 ಮತ್ತು 10ರಂತೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕ ವಲಯದಲ್ಲಿ ಸರ್ಕಾರದ ಕೋವಿಡ್ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement