ಕರ್ನಾಟಕದಲ್ಲಿ ಬಿಜೆಪಿ 150 ಸ್ಥಾನಗಳೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ

ಹುಬ್ಬಳ್ಳಿ: 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ 150 ಸ್ಥಾನಗಳೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಬುಧವಾರ ವಿಶ್ವಾಸ ವ್ಯಕ್ತಪಡಿಸಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಎರಡು ದಿನಗಳ ಭಾರತೀಯ ಜನತಾ ಪಕ್ಷದ ಕರ್ನಾಟಕ ರಾಜ್ಯ ಕಾರ್ಯಕಾರಿಣಿ ಸಭೆ ಮಂಗಳವಾರದಿಂದ ನಡೆಯುತ್ತಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾವು ಸುಮಾರು 150 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚಿಸುತ್ತೇವೆ ಎಂದು ಅರುಣ್ ಸಿಂಗ್ ಹೇಳಿದ್ದಾರೆ.
ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡುವ ಬಗ್ಗೆ ಹಾಗೂ ರಾಜಕೀಯ ನಿಲುವುಗಳ ಬಗ್ಗೆ ಚರ್ಚಿಸಲಾಗಿದೆ. ಅಲ್ಲದೆ ಇದೇ ವೇಳೆ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರಗಳು ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಅಭಿನಂದಿಸಲಾಯಿತು ಎಂದು ತಿಳಿಸಿದರು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ, ದುರಾಡಳಿತ ಹಾಗೂ ಅಧಿಕಾರಿಗಳ ಆತ್ಮಹತ್ಯೆ ವಿಚಾರವನ್ನು ಜನರ ಬಳಿಗೆ ತೆಗೆದುಕೊಂಡು ಹೋಗುವ ವಿಚಾರವನ್ನು ಸಭೆಯಲ್ಲಿ ನಿರ್ಧರಿಸಲಾಗಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಮಾರ್ಗದರ್ಶನ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ 150 ಸ್ಥಾನಗಳನ್ನು ಗೆಲ್ಲಲಾಗುವುದು ಎಂದರು.
2018ರ ವಿಧಾನಸಭೆ ಚುನಾವಣೆಯಲ್ಲಿಯೂ ಬಿಜೆಪಿ ಏಕೈಕ ದೊಡ್ಡ ಪಕ್ಷ
2018 ರ ಹಿಂದಿನ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು ಮತ್ತು ದಕ್ಷಿಣ ರಾಜ್ಯದ 224 ಅಸೆಂಬ್ಲಿ ಸ್ಥಾನಗಳಲ್ಲಿ 104 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಕಾಂಗ್ರೆಸ್ 78 ಸ್ಥಾನಗಳನ್ನು ಮತ್ತು ಜನತಾ ದಳ (ಜಾತ್ಯತೀತ) (ಜೆಡಿಎಸ್) 37 ಸ್ಥಾನಗಳನ್ನು ಗೆದ್ದಿತು. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ರಚಿಸಿದವು. 2019 ರಲ್ಲಿ ಕಾಂಗ್ರೆಸ್ ಪಕ್ಷದ 16 ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ಎಚ್‌ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿ (ಎಸ್) ಸರ್ಕಾರ ಪತನವಾಯಿತು. 105 ಶಾಸಕರು ಸರ್ಕಾರದ ವಿರುದ್ಧ ಮತ ಚಲಾಯಿಸಿದಾಗ ಕಾಂಗ್ರೆಸ್-ಜೆಡಿಎಸ್ ಸರ್ಕಾರ ವಿಶ್ವಾಸ ಮತ ಕಳೆದುಕೊಂಡ ನಂತರ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಆಗಿ ಆಯ್ಕೆಯಾಗಿದ್ದರು.

ಪ್ರಮುಖ ಸುದ್ದಿ :-   ಸವದತ್ತಿ | ಸಿಡಿಲು ಬಡಿದು ಇಬ್ಬರು ಸಾವು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement