ಕಾಂಗ್ರೆಸ್​ ಶಾಸಕರಿಗೆ ಪೊಲೀಸರ ಪ್ಯಾಂಟ್ ಒದ್ದೆ ಮಾಡುವ ಸಾಮರ್ಥ್ಯವಿದೆ ಎಂದ ಸಿಧು ವಿರುದ್ಧ ಮಾನನಷ್ಟ ನೋಟಿಸ್

ಚಂಡೀಗಢ: ಕಾಂಗ್ರೆಸ್ ಪಕ್ಷದ ಇಬ್ಬರು ಸದಸ್ಯರು ಪೊಲೀಸರ ಪ್ಯಾಂಟ್ ಒದ್ದೆ ಮಾಡುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳುವ ಮೂಲಕ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ವಿವಾದಕ್ಕೀಡಾಗಿದ್ದಾರೆ. ತಮ್ಮ ಪಕ್ಷದ ಸದಸ್ಯರನ್ನು ಹೊಗಳುವ ನವಜೋತ್ ಸಿಂಗ್ ಸಿಧು ಅವರ ಭಾಷಣದ ವಿಡಿಯೋ ವೈರಲ್ ಆಗಿ ಈಗ ನವಜೋತ್ ಸಿಂಗ್ ಸಿಧು ವಿರುದ್ಧ ಮಾನನಷ್ಟ ನೋಟಿಸ್‌ ಜಾರಿ ಮಾಡಲಾಗಿದೆ.
ನವಜೋತ್ ಸಿಂಗ್ ಸಿಧು ಅವರ ಈ ಅವಹೇಳನಕಾರಿ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ಶಿರೋಮಣಿ ಅಕಾಲಿ ದಳದ (ಎಸ್‌ಎಡಿ) ನಾಯಕ ದಲ್ಜಿತ್ ಸಿಂಗ್ ಚೀಮಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಚಂಡೀಗಢ ಪೊಲೀಸ್ ಅಧಿಕಾರಿಯೊಬ್ಬರು ಸಿಧುಗೆ ಮಾನನಷ್ಟ ನೋಟಿಸ್ ಕಳುಹಿಸಿದ್ದಾರೆ.
ಪೊಲೀಸರನ್ನು ಅವಮಾನಿಸಿದ್ದಕ್ಕಾಗಿ ನಾನು ನವಜೋತ್ ಸಿಂಗ್ ಸಿಧು ಅವರಿಗೆ ಮಾನನಷ್ಟ ನೋಟಿಸ್ ಕಳುಹಿಸಿದ್ದೇನೆ” ಎಂದು ಚಂಡೀಗಢದ ಉಪ ಪೊಲೀಸ್ ವರಿಷ್ಠಾಧಿಕಾರಿ ದಿಲ್ಶರ್ ಸಿಂಗ್ ಚಂದೇಲ್ ಹೇಳಿದ್ದಾರೆ.ಲುಧಿಯಾನದ ಕಾಂಗ್ರೆಸ್ ಸಂಸದ ರವನೀತ್ ಸಿಂಗ್ ಬಿಟ್ಟು ಪೊಲೀಸರನ್ನು ಬೆಂಬಲಿಸಿದ್ದಾರೆ ಮತ್ತು ಕೋವಿಡ್-19 ಸಮಯದಲ್ಲಿ ಪೊಲೀಸರ ಕಾರ್ಯವನ್ನು ಅವರು ಹೊಗಳಿದ್ದಾರೆ.
ಇತ್ತೀಚೆಗೆ ಸುಲ್ತಾನ್‌ಪುರ್ ಲೋಧಿಯಲ್ಲಿ ನಡೆದ ಸಮಾವೇಶದಲ್ಲಿ ಹಾಲಿ ಶಾಸಕ ನವತೇಜ್ ಸಿಂಗ್ ಚೀಮಾ ಅವರನ್ನು ಹೊಗಳಿದ್ದ ನವಜೋತ್ ಸಿಂಗ್ ಸಿಧು, ನವತೇಜ್ ಸಿಂಗ್ ಚೀಮಾ ಪೊಲೀಸರ ಪ್ಯಾಂಟ್ ಒದ್ದೆ ಮಾಡುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಬಣ್ಣಿಸಿದ್ದರು. ಅವರ ಹೇಳೀಕೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಅದಾದ ಮೇಲೂ ಮತ್ತೆ ಅವಹೇಳನಕಾರಿ ಹೇಳಿಕೆಯನ್ನು ಮುಂದುವರೆಸಿದ್ದ ನವಜೋತ್ ಸಿಂಗ್ ಸಿಧು ಭಾನುವಾರ ಬಟಾಲಾದಲ್ಲಿ ನಡೆದ ಮತ್ತೊಂದು ಸಮಾವೇಶದಲ್ಲಿಯೂ ಅವರು ಸ್ಥಳೀಯ ನಾಯಕ ಅಶ್ವನಿ ಸೆಖ್ರಿಯನ್ನು ಹೊಗಳುತ್ತಾ ಇದೇ ಹೇಳಿಕೆ ನೀಡಿದ್ದರು.
ನವಜೋತ್ ಸಿಂಗ್ ಸಿಧು ಅವರ ಹೇಳಿಕೆಯ ಬಗ್ಗೆ ಪತ್ರಕರ್ತರು ಅವರನ್ನು ಪ್ರಶ್ನಿಸಿದಾಗ ನನ್ನ ಹೇಳಿಕೆಯನ್ನು ಯಥಾರ್ಥವಾಗಿ ತೆಗೆದುಕೊಳ್ಳಬಾರದು ಎಂದು ಹೇಳಿದ್ದರು. ನಾನು ಕಾಂಗ್ರೆಸ್ ನಾಯಕರಿಗೆ ಅಂತಹ ಅಧಿಕಾರವಿದೆ ಎಂದು ಹೇಳಿದ್ದಷ್ಟೆ ಎಂದು ಹೇಳಿದ್ದರು.
ನವಜೋತ್ ಸಿಂಗ್ ಸಿಧು ಹೇಳಿಕೆಯ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಕೆಲವು ಪೊಲೀಸ್ ಅಧಿಕಾರಿಗಳು ಸಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆಗೆ ಗುಲಾಂ ನಬಿ ಆಜಾದ್ ಸ್ಪರ್ಧಿಸಲ್ಲ

4 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement