ಕಾರವಾರ: ಶಾಲೆಗೆ ಹೋಗುತ್ತಿದ್ದ ಮಕ್ಕಳ ಮೇಲೆ ಜೇನು ದಾಳಿ: 16 ಮಂದಿ ಆಸ್ಪತ್ರೆಗೆ ದಾಖಲು

ಕಾರವಾರ: ಶಾಲೆಗೆ ಹೋಗುತ್ತಿದ್ದ 20ಕ್ಕೂ ಹೆಚ್ಚು ಮಕ್ಕಳಿಗೆ ಜೇನು ನೊಣ ದಾಳಿ ಮಾಡಿ ಕಡಿದ ಘಟನೆ ಕಾರವಾರ ತಾಲೂಕಿನ ಕಿನ್ನರ ಗ್ರಾಮದ ನ್ಯೂ ಹೈಸ್ಕೂಲಿನಲ್ಲಿ ಮಂಗಳವಾರ ನಡೆದ ಬಗ್ಗೆ ವರದಿಯಾಗಿದೆ.
ಜೇನು ಕಡಿತದಿಂದ 16 ಮಕ್ಕಳು ಅಸ್ವಸ್ಥರಾಗಿದ್ದು, ಕೆಲ ಮಕ್ಕಳ ಬೆನ್ನು, ಕುತ್ತಿಗೆ, ಮುಖ, ತಲೆಗೆ ಗಾಯಗಳಾಗಿವೆ. ಗಾಯಗೊಂಡಿರುವ ಮಕ್ಕಳನ್ನು ಊರವರ ಸಹಾಯದಿಂದ ಕಾರವಾರ ಜಿಲ್ಲಾಸ್ಪತ್ರೆಗೆ ಕ್ರಿಮ್ಸ್‌ಗೆ ದಾಖಲಿಸಲಾಗಿದೆ. ಮಂಗಳವಾರ ಬೆಳಗ್ಗೆ ಶಾಲೆಗೆ ಮಕ್ಕಳು ಹೋಗುತ್ತಿರುವಾಗ ಶಾಲೆ ಪಕ್ಕದಲ್ಲೇ ತೆಂಗಿನಮರದಲ್ಲಿ ಗೂಡುಕಟ್ಟಿದ್ದ ಜೇನುನೊಣ ಏಕಾಏಕಿ ದಾಳಿ ಮಾಡಿ 20ಕ್ಕೂ ಹೆಚ್ಚು ಮಕ್ಕಳಿಗೆ ಕಡಿದಿದೆ. ತಕ್ಷಣಕ್ಕೆ 16 ಜನರು ಮಕ್ಕಳನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದಲ್ಲದೇ ಗ್ರಾಮದ ಓರ್ವ ಪುರುಷ ಹಾಗೂ ಮಹಿಳೆಗೂ ಜೇನು ಕಡಿದಿದ್ದು ಅವರನ್ನೂ ಸಹ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾಸಕಿ ರೂಪಾಲಿ ನಾಯ್ಕ್‌ ಭೇಟಿ
ಘಟನೆ ನಡೆದ ವಿಷಯ ತಿಳಿದ ಕಾರವಾರದ ಶಾಸಕಿ ರೂಪಾಲಿ ನಾಯ್ಕ್ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಇದೇ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಕ್ಕಳ ಮೇಲೆ ಜೇನು ಕಚ್ಚಿ ಹೆಚ್ಚಿನ ಹಾನಿ ಮಾಡಿದೆ. ಇದಕ್ಕೆ ಸೂಕ್ತ ಚಿಕಿತ್ಸೆ ನೀಡಲು ಸೂಚಿಸಲಾಗಿದೆ. ಅರಣ್ಯ ಇಲಾಖೆಗೂ ಶಾಲಾ ಆವರಣದಲ್ಲಿ ಇರುವ ಜೇನನ್ನು ತೆರವುಗೊಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement