ಬೆಳಗಾವಿ: ಪ್ರತಿಭಟನೆಗೆ ಮುಂದಾದ ವಾಟಾಳ್ ನಾಗರಾಜ್ ಸೇರಿ ಹಲವು ಹೋರಾಟಗಾರರು ಪೊಲೀಸ್ ವಶಕ್ಕೆ

ಬೆಳಗಾವಿ: ಎಂಇಎಸ್ ಸಂಘಟನೆ ನಿಷೇಧ ಆಗ್ರಹಿಸಿ ಎಂಇಎಸ್‌ (MES) ವಿರುದ್ಧ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆದ ಸಮಯದಲ್ಲಿ ಅವರನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಕುವೆಂಪು ಭಾವಚಿತ್ರಕ್ಕೆ ಹೂಹಾರ ಹಾಕಿ ವಾಟಾಳ್ ನಾಗರಾಜ ಪ್ರತಿಭಟನೆಗೆ ಚಾಲನೆ ನೀಡಿದರು. ಆ ವೇಳೆ ಎಂಇಎಸ್ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. ನಂತರ ವಾಟಾಳ್ ನಾಗರಾಜ್ ಅವರನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಜ್ಯದಲ್ಲಿ ಎಂಇಎಸ್ ನಿಷೇಧಿಸುವಂತೆ ಒತ್ತಾಯಿಸಿ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಅದಕ್ಕೆ ಬೆಂಬಲಿಸುವಂತೆ ಕೋರಲು ವಾಟಾಳ್​ ನಾಗರಾಜ್​​ ಬೆಳಗಾವಿಗೆ ಬಂದ ಸಂದರ್ಭದಲ್ಲಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆಗೆ ಮುಂದಾಗಿದ್ದರು. ಪೊಲೀಸರು ವಾಟಾಳ್ ನಾಗರಾಜ್ ಸೇರಿದಂತೆ 15 ಕ್ಕೂ ಹೆಚ್ಚು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement