ಕರ್ನಾಟಕದಲ್ಲಿ ಕೊರೊನಾ ಏರಿಕೆ: ಬೆಂಗಳೂರಲ್ಲಿ 565 ಸೇರಿ ಹೊಸದಾಗಿ ರಾಜ್ಯದಲ್ಲಿ 707 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಸತತ ಎರಡನೇ ದಿನವೂ ಏರಿಕೆ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 707 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,065,05ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಮಹಾಮಾರಿ ಕೊರೊನಾದಿಂದ ಇಂದು, ಗುರುವಾರ ಮೂವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38,327ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 565 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,62,962ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೊದಿಂದ ಮೂವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳು 8223 ಕ್ಕೆ ಏರಿಕೆಯಾಗಿದೆ. ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 252 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,59,926ಕ್ಕೆ ಏರಿಕೆಯಾಗಿದೆ.
ಬೆಂಗಳೂರು ನಗರ 565, ಉಡುಪಿ 19, ಹಾಸನ 17, ಮೈಸೂರು 16, ಕೊಡಗು 12, ದಕ್ಷಿಣ ಕನ್ನಡ 11, ಮಂಡ್ಯ, ಧಾರವಾಡ, ಬೆಳಗಾವಿ 8, ಉತ್ತರ ಕನ್ನಡ, ತುಮಕೂರು 6, ಬಳ್ಳಾರಿ, ಕೋಲಾರ 5, ಬೆಂಗಳೂರು ಗ್ರಾಮಾಂತರ 4, ಶಿವಮೊಗ್ಗ, ವಿಜಯಪುರ, ಚಿಕ್ಕಮಗಳೂರು, ಕಲಬುರಗಿ 3, ಚಿತ್ರದುರ್ಗ 2, ಚಾಮರಾಜನಗರ, ದಾವಣಗೆರೆ, ಯಾದಗಿರಿ 1.

ಪ್ರಮುಖ ಸುದ್ದಿ :-   ಪ್ರಜ್ವಲ್‌ ರೇವಣ್ಣ ಪ್ರಕರಣ : ದೇವೇಗೌಡ, ಎಚ್‌ಡಿಕೆಯನ್ನು ತಪ್ಪಾಗಿ ಬಿಂಬಿಸಿ ಸುದ್ದಿ ಪ್ರಸಾರ ಮಾಡದಂತೆ 89 ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement