ಗೋ‌ಮೂತ್ರದಿಂದ ಸೋಪು- ಶಾಂಪು ತಯಾರಿಕೆ, ಸೆಗಣಿಯಿಂದ ಆಯಿಲ್ ಪೇಂಟ್ ಉತ್ಪಾದನೆಗೆ ಕ್ರಮ: ಸಚಿವ ಪ್ರಭು ಚವ್ಹಾಣ

posted in: ರಾಜ್ಯ | 0

ಬೆಂಗಳೂರು: ದೇಶದ ವಿವಿಧೆಡೆ ಕಡೆ ನಾನು ಭೇಟಿ ಮಾಡಿದ್ದೇನೆ, ಅಲ್ಲಿ ಗೋ‌ಮೂತ್ರದಿಂದ ಸೋಪು, ಶಾಂಪು ತಯಾರಿಸುತ್ತಾರೆ, ಸೆಗಣಿಯಿಂದ ಆಯಿಲ್ ಪೇಂಟ್ ಮಾಡುತ್ತಿದ್ದಾರೆ. ಇದರ ಬಗ್ಗೆ ನಾವು ಚರ್ಚೆ ನಡೆಸಿದ್ದೇವೆ. ನಾವು ಸಹ ಇದನ್ನು ಉತ್ಪಾದಿಸಲು ತೀರ್ಮಾನ ಮಾಡಿದ್ದೇವೆ ಎಂದು ಪಶುಸಂಗೋಪನ ಸಚಿವ ಪ್ರಭು ಚವ್ಹಾಣ ಹೇಳಿದರು.
ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಬರ್ ಗ್ಯಾಸ್ ಬಗ್ಗೆಯೂ ಚಿಂತಿಸಿದ್ದೇವೆ. ನಮ್ಮ ರೈತರು ಸ್ವಯಂ ಉದ್ಯೋಗ ಮಾಡಬಹುದು ಎಂದು ಪಶುಸಂಗೋಪನ ಸಚಿವ ಪ್ರಭು ಚವ್ಹಾಣ ಹೇಳಿದರು.
ಗೋ ಸಂರಕ್ಷಣೆ ಕಾಯ್ದೆಯ ನಂತರ 10 ಸಾವಿರ ಪ್ರಾಣಿಗಳ ರಕ್ಷಣೆಯಾಗಿದೆ. ರಕ್ಷಣೆ ಮಾಡಿದ ಗೋವುಗಳು ಗೋಶಾಲೆಗೆ ಬಿಟ್ಟಿದ್ದೇವೆ. ಈ ಬಗ್ಗೆ 500 ಕ್ಕಿಂತ ಹೆಚ್ಚು ಕೇಸ್ ದಾಖಲಿಸಿದ್ದೇವೆ ಎಂದು ಸಚಿವರು ಮಾಹಿತಿ ನೀಡಿದರು.
ಪ್ರಸ್ತುತ 19 ಜಿಲ್ಲೆಗಳಲ್ಲಿ ಗೋಶಾಲೆ ನಿರ್ಮಾಣಕ್ಕೆ ಪೂರ್ವ ಸಿದ್ಧತೆಗಳು ನಡೆದಿವೆ. ಪ್ರತಿ ಜಿಲ್ಲೆಯಲ್ಲಿ 50ರಿಂದ 100 ಎಕರೆ ವಿಸ್ತೀರ್ಣದ ಗೋಶಾಲೆ ಮಾಡಲಾಗುತ್ತದೆ. ಒಂದು ಗೋ ಶಾಲೆಗೆ 2 ಕೋಟಿ ರೂ.ಗಳು ಬೇಕು. ಸರ್ಕಾರ ಒಂದು ಗೋಶಾಲೆಗೆ 50 ಲಕ್ಷ ರೂ. ಇಟ್ಟಿದೆ. ಈಗಾಗಲೇ 26 ಲಕ್ಷ ಹಣ ಬಿಡುಗಡೆಯಾಗಿದೆ. ಕೆಲಸ ನೋಡಿ ಉಳಿದ ಹಣ ಬಿಡುಗಡೆ ಮಾಡುತ್ತೇವೆ ಎಂದರು.
ನಮ್ಮ‌ ಇಲಾಖೆಯಲ್ಲಿ 1083 ಹುದ್ದೆಗಳು ಖಾಲಿಯಿದೆ. ನಾನು 900 ಹುದ್ದೆಗಳ ಭರ್ತಿಗೆ ಕೇಳಿದ್ದೆ. ಈಗ ಸಿಎಂ 400 ಹುದ್ದೆ ಭರ್ತಿಗೆ ಸಮ್ಮತಿಸಿದ್ದಾರೆ. ಒಟ್ಟು 468 ಹುದ್ದೆಗಳ ಭರ್ತಿಗೆ ನಿರ್ಧರಿಸಿದ್ದೇವೆ. ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಅನುಮತಿ ಸಿಗಲಿದೆ ಎಂದು ಸಚಿವ ಚವ್ಹಾಣ್ ಹೇಳಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement