ತಮಿಳುನಾಡಿನಲ್ಲಿ ಮತ್ತೆ ಭಾರೀ ಮಳೆ: ಮೂವರು ಸಾವು, ಚೆನ್ನೈ ಜಲಾವೃತ

ಚೆನ್ನೈ: ತಮಿಳುನಾಡಿನಲ್ಲಿ ವರುಣನ ಆರ್ಭಟ ಮತ್ತೆ ಜೋರಾಗಿದ್ದು, ಮಳೆ ಸಂಬಂಧಿ ಘಟನೆಗಳಿಂದ ಮೂವರು ಮೃತಪಟ್ಟಿದ್ದಾರೆ.
ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.
ಚೆನ್ನೈ, ಕಾಂಚಿಪುರಂ, ತಿರುವಲ್ಲೂರ್‌, ಚೆಂಗಲೆಪಟ್ಟು ಈ ನಾಲ್ಕು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 20 ಸೆ.ಮೀ.ನಷ್ಟು ಮಳೆಯಾಗಿದೆ ಹಾಗೂ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ತಮಿಳುನಾಡಿನ ಕರಾವಳಿಯಲ್ಲಿ ಉಂಟಾಗಿರುವ ಚಂಡಮಾರುತವು ರಾಜ್ಯದಲ್ಲಿ ಭಾರೀ ಮಳೆಗೆ ಕಾರಣವಾಗಿದೆ. ರಾಜಧಾನಿ ಚೆನ್ನೈನಲ್ಲಿ 20 ಸೆ.ಮೀ.ನಷ್ಟು ಮಳೆಯಾಗಿದ್ದು, ರಸ್ತೆ ಜಲಾವೃತಗೊಂಡಿದೆ. ಮನೆಗಳಿಗೂ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಮೆಟ್ರೋ ಸಂಚಾರವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ನಗರದಲ್ಲಿ ನಾಲ್ಕು ಸುರಂಗ ಮಾರ್ಗಗಳನ್ನು ಮುಚ್ಚಿ, 145ಕ್ಕೂ ಹೆಚ್ಚು ಪಂಪ್‌ಗಳನ್ನು ಬಳಸಿ ಮಳೆ ನೀರನ್ನು ಪಂಪ್‌ ಮಾಡಲಾಗುತ್ತಿದೆ.

0 / 5. 0

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ

ನಿಮ್ಮ ಕಾಮೆಂಟ್ ಬರೆಯಿರಿ

advertisement