ಚಲಿಸುತ್ತಿದ್ದ ರೈಲಿನಿಂದ ಮಹಿಳೆಯರ ಜಂಪ್.. ಪವಾಡಸದೃಶ ರೀತಿಯಲ್ಲಿ ಅಪಾಯದಿಂದ ಪಾರು..! ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕೋಲ್ಕತ್ತಾ: ಪ್ರಜ್ಞಾವಂತಿಕೆ ಮತ್ತು ಧೈರ್ಯವನ್ನು ಪ್ರದರ್ಶಿಸಿದ ಘಟನೆಯಲ್ಲಿ, ಪಶ್ಚಿಮ ಬಂಗಾಳದಲ್ಲಿ ರೈಲಿಗೆ ಸಿಲುಕುತ್ತಿದ್ದ ಮಹಿಳೆಯನ್ನುರೈಲ್ವೆ ಪೊಲೀಸ್‌ ತಪ್ಪಿಸಿದ್ದಾನೆ. ವರದಿಯ ಪ್ರಕಾರ, ಆರ್‌ಪಿಎಫ್ ಅಧಿಕಾರಿ ಬಬ್ಲು ಕುಮಾರ್ ಅವರನ್ನು ಪಶ್ಚಿಮ ಬಂಗಾಳದ ಪುರುಲಿಯಾ ನಿಲ್ದಾಣದಲ್ಲಿ ನಿಯೋಜಿಸಲಾಗಿತ್ತು. ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸುತ್ತಿದ್ದ ಮಹಿಳೆಯೊಬ್ಬರು ಆಕಸ್ಮಿಕವಾಗಿ ರೈಲು ಮತ್ತು ಪ್ಲಾಟ್‌ಫಾರ್ಮ್ ಅಂತರದ ನಡುವೆ ಜಾರಿ ಬಿದ್ದಿದದ್ದಾರೆ. ಇದನ್ನು ಬಬ್ಲು … Continued

ಸರ್ಕಾರದಿಂದ ಮಹತ್ವದ ನಿರ್ಧಾರ… ಪೋಷಕರು 2 ಡೋಸ್ ಲಸಿಕೆ ಪಡೆದಿದ್ರೆ ಮಾತ್ರ ಮಕ್ಕಳಿಗೆ ಶಾಲೆ ಪ್ರವೇಶ, ಮದುವೆಗೆ 500 ಜನರಿಗೆ ಅವಕಾಶ….

ಬೆಂಗಳೂರು: ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಸಭಯ ಬಳಿಕೆ ನೂತನ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡಿದ ಕಂದಾಯ ಸಚಿವ ಆರ್​.ಅಶೋಕ್, ಪೋಷಕರು 2 ಡೋಸ್ ಲಸಿಕೆ ಪಡೆದಿದ್ದರೆ ಮಾತ್ರ ಮಕ್ಕಳಿಗೆ ಶಾಲೆ ಪ್ರವೇಶ ನೀಡಲಾಗುವುದು ಎಂದು ಪ್ರಕಟಿಸಿದರು. ರಾಜ್ಯದಲ್ಲಿ ಶಾಲಾ-ಕಾಲೇಜುಗಳಲ್ಲಿ ಹೆಚ್ಚಿನ ಮಟ್ಟದ ಪ್ರಕರಣಗಳು ಪತ್ತಯಾಗ್ತಿವೆ … Continued

ನಾಳೆ ಒಡಿಶಾ, ಆಂಧ್ರ ಪ್ರದೇಶಕ್ಕೆ ಅಪ್ಪಳಿಸಲಿದೆ ಜವಾದ್ ಚಂಡಮಾರುತ; ಇಂದಿನಿಂದಲೇ ಹೈ ಅಲರ್ಟ್

ನವದೆಹಲಿ: ಒಡಿಶಾ, ಆಂಧ್ರಪ್ರದೇಶ ಸೇರಿದಂತೆ ಕೆಲವು ರಾಜ್ಯಗಳಿಗೆ ನಾಳೆ (ಶನಿವಾರ) ಜವಾದ್ ಚಂಡಮಾರುತ ಅಪ್ಪಳಿಸಲಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಇಂದು ಸಂಜೆಯಿಂದಲೇ ಮಳೆ ತೀವ್ರಗೊಳ್ಳಲಿದ್ದು, ಮುಂದಿನ 12 ಗಂಟೆಗಳಲ್ಲಿ ಸೈಕ್ಲೋನಿಕ್ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಸಂಜೆ ವೇಳೆಗೆ ಬಂಗಾಳಕೊಲ್ಲಿಯಲ್ಲಿ ಜವಾದ್ ಚಂಡಮಾರುತವು ರೂಪುಗೊಳ್ಳಲಿದ್ದು, ಶನಿವಾರ ಬೆಳಿಗ್ಗೆ ಆಂಧ್ರ ಪ್ರದೇಶದ … Continued

ನಾವು ಪಾಕಿಸ್ತಾನದಲ್ಲಿ ಕೈಗಾರಿಕೆಗಳನ್ನು ನಿಷೇಧಿಸಬೇಕೆಂದು ನೀವು ಬಯಸುತ್ತೀರಾ: ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಪ್ರಶ್ನೆ

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯಕ್ಕೆ ಪಾಕಿಸ್ತಾನ ಕಾರಣ ಎಂದು ವಾದಿಸಿದ ಉತ್ತರ ಪ್ರದೇಶ ಸರ್ಕಾರವನ್ನು ಸುಪ್ರೀಂ ಕೋರ್ಟ್‌ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಪಾಕಿಸ್ತಾನ ಕೈಗಾರಿಕೆಗಳ ನಿಷೇಧವನ್ನು ನೀವು ಬಯಸುತ್ತೀರಾ ಎಂದು ಪ್ರಶ್ನಿಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಹೆಚ್ಚಳಕ್ಕೆ ಉತ್ತರ ಪ್ರದೇಶದ ಕೈಗಾರಿಕೆಗಳು ಕಾರಣವಲ್ಲ. ಬದಲಿಗೆ ಪಾಕಿಸ್ತಾನದಿಂದ ಬರುತ್ತಿರುವ ಕಲುಷಿತ ಗಾಳಿಯಿಂದ … Continued

ಐಎಂಎಫ್​ನ ಉನ್ನತ ಹುದ್ದೆಗೆ ಏರಿದ ಮೈಸೂರು ಮೂಲದ ಗೀತಾ ಗೋಪಿನಾಥ್

ನವದೆಹಲಿ: ಅಂತಾರಾಷ್ಟ್ರೀಯ ಹಣಕಾಸು ನಿಧಿ((IMF))ಯ ಮುಖ್ಯ ಆರ್ಥಿಕ ತಜ್ಞೆ ಗೀತಾ ಗೋಪಿನಾಥ್ ಅವರ ಬಗ್ಗೆ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ಗೀತಾ ಗೋಪಿನಾಥ್ ಅವರಿಗೆ ಬಡ್ತಿ ನೀಡುವುದರ ಜತೆಗೆ ಮಹತ್ವದ ಹುದ್ದೆಯ ಜವಾಬ್ದಾರಿಯನ್ನು ವಹಿಸಲಾಗಿದೆ. ಇದಾದ ನಂತರ ಈಗ ಗೀತಾ ಈ ಸಂಸ್ಥೆಯಲ್ಲಿ ವಿಶೇಷ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಕರ್ನಾಟಕದ ಮೈಸೂರು ಮೂಲದ ಗೀತಾ ಗೋಪಿನಾಥ್ ಅವರು ಅಂತಾರಾಷ್ಟ್ರೀಯ … Continued

ಪಬ್​​ನಲ್ಲಿ ನಟ, ನಿರೂಪಕ ಕಿರಿಕ್ ಕೀರ್ತಿ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ

ಬೆಂಗಳೂರು: ಬೆಂಗಳೂರಿನ ಸದಾಶಿವನಗರದ ಪಬ್ ನಲ್ಲಿ ತಡರಾತ್ರಿ ಬಿಗ್​ಬಾಸ್ ಸ್ಪರ್ಧಿ ಕಿರಿಕ್​ ಕೀರ್ತಿ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ಮಾಡಿದ ಘಟನೆ ನಡೆದ ಬಗ್ಗೆ ವರದಿಯಾಗಿದೆ. ತಡರಾತ್ರಿ ಬೆಂಗಳೂರಿನ ಸದಾಶಿವನಗರದ ಪಬ್​ನಲ್ಲಿ ಫೋಟೋ ವಿಚಾರಕ್ಕೆ ಸಂಬಂಧಿಸಿದಂತೆ ಕಿರಿಕ್ ಕೀರ್ತಿ ಮೇಲೆ ವ್ಯಕ್ತಿಯೊಬ್ಬ ಬಿಯರ್​ ಬಾಟಲ್​ನಿಂದ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಸದಾಶಿವನಗರ ಪಬ್​ ಗೆ ಕಿರಿಕ್ ಕೀರ್ತಿ … Continued

ಕೊರೊನಾದಿಂದ ಮೃತಪಟ್ಟ ಬಿಪಿಎಲ್​ ಕುಟುಂಬದ ಸದಸ್ಯರಿಗೆ 1 ಲಕ್ಷ ರೂ.ಪರಿಹಾರ; ರಾಜ್ಯ ಸರ್ಕಾರದಿಂದ ತಿದ್ದುಪಡಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಕ್ಕೆ ಕೋವಿಡ್‌ ಪರಿಹಾರ ನೀಡುವುದಕ್ಕೆ ಸಂಬಂಧಿಸಿದಂತೆ ತಾನು ಈ ಮಹಿಂದೆ ನೀಡಿದ್ದ ಆದೇಶಕ್ಕೆ ತಿದ್ದುಪಡಿ ಆದೇಶ ಹೊರಡಿಸಿದೆ. ಡಿಸೆಂಬರ್ 2ರ ಗುರುವಾರ ಪ್ರಮುಖವಾದ ತಿದ್ದುಪಡಿ ಆದೇಶವನ್ನು ಹೊರಡಿಸಿದೆ. ಈ ಹಿಂದೆ, ಸೆಪ್ಟೆಂಬರ್ 28ರಂದು ಹೊರಡಿಸಿದ್ದ ಆದೇಶ ಮತ್ತು ಅಕ್ಟೋಬರ್ 1ರಂದು ರಾಜ್ಯ ಸರ್ಕಾರವು ತಿದ್ದುಪಡಿಯ ಮಾಡಿದ ನಂತರದಲ್ಲಿ … Continued

ಆಲಮೇಲ ಪಟ್ಟಣ ಪಂಚಾಯತ ಮಾಜಿ ಸದಸ್ಯನ ಬರ್ಬರ ಕೊಲೆ

ವಿಜಯಪುರ:ತಡರಾತ್ರಿ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ಭೀಕರ ಕೊಲೆ ನಡೆದಿದೆ. ಆಲಮೇಲ ಪಟ್ಟಣ ಪಂಚಾಯತ ಮಾಜಿ ಸದಸ್ಯ ಪ್ರದೀಪ ಎಂಟಮಾನ (37 ವರ್ಷ) ಭೀಕರ ಕೊಲೆ ನಡೆದಿದೆ. ಶುಕ್ರವಾರ ಬೆಳಿಗ್ಗೆ ಒಂದು ಗಂಟೆ ಸುಮಾರಿಗೆ ಆಲಮೇಲ ಪಟ್ಟಣದ ಯುಕೆಪಿ ಕ್ಯಾಂಪ್ ಬಳಿಯ ಸರ್ಕಾರಿ ಶಾಲೆಯ ಆವರಣದಲ್ಲಿ ಪ್ರದೀಪ ಎಂಟಮಾನ‌ನನ್ನು ಹತ್ಯೆ ಮಾಡಲಾಗಿದೆ. ರೌಡಿ ಶೀಟರ್ ಆಗಿದ್ದ … Continued

ಹುಬ್ಬಳ್ಳಿ-ಅಂಕೋಲಾ ರೈಲು: ವನ್ಯಜೀವಿ ಮಂಡಳಿಯಿಂದ ಹೈಕೋರ್ಟ್ ಸಾಧಕ-ಬಾಧಕದ ವರದಿ ಕೇಳಿದ್ದು ಸಕಾರಾತ್ಮಕ ಬೆಳವಣಿಗೆ

ಯಲ್ಲಾಪುರ: ಹುಬ್ಬಳ್ಳಿ- ಅಂಕೋಲಾ ರೈಲು ಮಾರ್ಗಕ್ಕೆ ಈಗಾಗಲೇ ಅರಣ್ಯ ಇಲಾಖೆಯಿಂದ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಆದರೆ, ಕೆಲವು ಸರ್ಕಾರೇತರ ಸಂಘ ಸಂಸ್ಥೆಗಳು ಮತ್ತು ಪರಿಸರವಾದಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರಿಂದ ಅದಕ್ಕೆ ಹಿನ್ನಡೆಯಾಗಿತ್ತು ಎಂದು ಅರಣ್ಯ ಮತ್ತು ಪರಿಸರ, ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಉಮೇಶ್ ಕತ್ತಿ ಹೇಳಿದರು. ಪಟ್ಟಣಕ್ಕೆ ಗುರುವಾರ ಸಂಜೆ ತಮ್ಮ ಕುಟುಂಬದೊಂದಿಗೆ … Continued

ಬಲು ಅಪರೂಪ ನಮ್‌ ಜೋಡಿ..: 35 ವರ್ಷ ಕಾದು 65ರ ವಯಸ್ಸಿನಲ್ಲಿ ತಾನು ಪ್ರೀತಿಸಿದವಳನ್ನೇ ಮದುವೆಯಾದ ವ್ಯಕ್ತಿ..!

ಮಂಡ್ಯ: ಇಲ್ಲೊಂದು ಅಪರೂಪದ ಮದುವೆ ನಡೆದಿದೆ. ವ್ಯಕ್ತಿಯೊಬ್ಬ ತಾನು ಪ್ರೀತಿಸಿದವಳಿಗಾಗಿ ಕಾಯ್ದು ಕಾಯ್ದು 35 ವರ್ಷದ ಬಳಿಕೆ ಅವಳನ್ನೇ ವರಿಸಿದ್ದಾನೆ..! ಆಕೆ ಬೇರೆ ಯಾರೂ ಅಲ್ಲ, ಈ ಪ್ರೇಮಿಯ ಸೋದರತ್ತೆಯ ಮಗಳೇ.ಅವಳನ್ನು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದ ಈ ವ್ಯಕ್ತಿ ಅವಳಿಗಾಗಿ ಬರೋಬ್ಬರಿ 35 ವರ್ಷ ಕಾದಿದ್ದಾರೆ..35 ವರ್ಷದ ನಂತರ ಇವರಿಬ್ಬರಿಗೆ ಮದುವೆಯಾಗುವ ಯೋಗ ಕೂಡಿಬಂದಿದೆ. ಈ … Continued