ವಿಧಾನ ಪರಿಷತ್‌ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಷರೀಫ್ ಬಾಬು ವಿರುದ್ಧ ದೂರು ದಾಖಲು

ಬೆಂಗಳೂರು: ಇಂದು (ಡಿಸೆಂಬರ್ 1) ಬೆಂಗಳೂರು ನಗರ ಕ್ಷೇತ್ರd ವಿಧಾನ ಪರಿಷತ್‌ ‌ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಷರೀಫ್ ಬಾಬು ವಿರುದ್ಧ ದೂರು ದಾಖಲಾಗಿದೆ. ಬಿಜೆಪಿ ಮುಖಂಡರು ದೂರು ಸಲ್ಲಿಸಿದ್ದು,. ಪ್ರಚಾರ ಭಾಷಣದಲ್ಲಿ ಹಣ ನೀಡುವ ಆಮಿಷ ಒಡ್ಡಿದ ಆರೋಪದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ದೂರು ದಾಖಲಾಗಿದೆ. ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ … Continued

ವಿಮಾನದ ಲ್ಯಾಂಡಿಂಗ್ ಗೇರ್‌ನಲ್ಲಿ ಅಡಗಿಕೊಂಡು 2.5 ಗಂಟೆ ಹಾರಾಟ ಹಾರಾಟ ಮಾಡಿದರೂ ಬದುಕುಳಿದ ಯುವಕ..!

ಸರ್ಫ್‌ಸೈಡ್ (ಅಮೆರಿಕ): ಯುವಕನೊಬ್ಬ ವಿಮಾನದ ಲ್ಯಾಂಡಿಂಗ್ ಗೇರ್‌ನಲ್ಲಿ ಅಡಗಿಕೊಂಡು 1,600 ಕಿಮೀಗಿಂತಲೂ ಹೆಚ್ಚು ದೂರವನ್ನು ಕ್ರಮಿಸಿಯೂ ಬದುಕಿ ಉಳಿದಿದ್ದಾನೆ..! ಅಮೆರಿಕದ ಮಿಯಾಮಿಯಲ್ಲಿ ಈ ಅಚ್ಚರಿಯ ಘಟನೆ ನಡೆದಿದ್ದು, ಗ್ವಾಟೆಮಾಲಾದಿಂದ ಮಿಯಾಮಿಗೆ ಚಲಿಸುತ್ತಿದ್ದ ವಿಮಾನದ ಲ್ಯಾಂಡಿಂಗ್‌ ಗೇರ್‌ನಲ್ಲಿ 26 ವರ್ಷದ ಯುವಕ ಅಡಗಿಕೊಂಡು 1,600 ಕಿ.ಮೀ ದೂರ ಪ್ರಯಾಣಿಸಿದ್ದಾನೆ.ಆತ ಜೀವಂತವಾಗಿ ಹೊರಬಂದಿದ್ದಾನೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗ್ವಾಟೆಮಾಲಾದಿಂದ … Continued

ಹುಬ್ಬಳ್ಳಿ ರೋಟರಿ ಶಾಲೆ ವಿದ್ಯಾರ್ಥಿಗೆ ಕೋವಿಡ್ ದೃಢ: ಸೋಮವಾರದ ವರೆಗೆ ಶಾಲೆಗೆ ರಜೆ

ಹುಬ್ಬಳ್ಳಿ: ಇಲ್ಲಿನ ಆದರ್ಶನಗರದ ರೋಟರಿ ಶಾಲೆಯ ವಿದ್ಯಾರ್ಥಿಯೋರ್ವನಿಗೆ ಕೊರೊನಾ ದೃಡಪಟ್ಟಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಸೋಮವಾರದ ವರೆಗೆ ಎಲ್ಲ ತರಗತಿಗಳಿಗೂ ರಜೆ ಘೋಷಿಸಲಾಗಿದೆ. ಎರಡು ಮೂರು ದಿನಗಳಿಂದ ರೋಟರಿ ಶಾಲೆಗೆ ಗೈರಾಗಿದ್ದ 9ನೇ ತರಗತಿಯ ವಿದ್ಯಾರ್ಥಿಗೆ ಇಂದು ಕೋವಿಡ್ ದೃಢ ಪಟ್ಟಿದ್ದು ಈ ಹಿನ್ನೆಲೆಯಲ್ಲಿ ಪಾಲಕರು ಶಾಲೆಗೆ ಈ ವಿಷಯ ತಿಳಿಸಿದ ತಕ್ಷಣ ಆಡಳಿತ ಮಂಡಳಿ … Continued

ಐಎಂಎ ವಂಚನೆ ಪ್ರಕರಣ: ಸಿಬಿಐ, ಇಡಿ ಜೊತೆ ಸಮನ್ವಯಕ್ಕೆ ಸಕ್ಷಮ ಪ್ರಾಧಿಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಕ್ಷಮ ಪ್ರಾಧಿಕಾರವು ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದೊಂದಿಗೆ ಸಮನ್ವಯ ಸಾಧಿಸಿ ಮುಂದಿನ ಅಗತ್ಯ ಕ್ರಮ ಕೈಗೊಳ್ಳಬಹುದು ಎಂದು ಮಂಗಳವಾರ ಕರ್ನಾಟಕ ಹೈಕೋರ್ಟ್‌ ನಿರ್ದೇಶಿಸಿದ್ದು, ಈ ಸಂಬಂಧದ ಎಲ್ಲಾ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಲೇವಾರಿ ಮಾಡಿದೆ. ಐಎಂಎ ಹಗರಣವನ್ನು ಸಿಬಿಐಗೆ ವಹಿಸಬೇಕು ಹಾಗೂ ಹೂಡಿಕೆದಾರರ ಹಣ … Continued

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ ಸಾಧಕ -ಬಾಧಕಗಳ ಮೌಲ್ಯಮಾಪನಕ್ಕೆ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು:  ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆಗೆ ಸಂಬಂಧಿಸಿದಂತೆ ಯೋಜನೆಯ ಸಾಧಕ ಬಾಧಕದ ಬಗ್ಗೆ ಅಧ್ಯಯನ ನಡೆಸಲು ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ರಾಜ್ಯ ಹೈಕೋರ್ಟ್ ನಿರ್ದೇಶನ ನೀಡಿದೆ. ಬುಧವಾರ ಮುಖ್ಯನ್ಯಾಯಮೂರ್ತಿ ರಿತುರಾಜ ಅವಸ್ಥಿ ಮತ್ತು ನ್ಯಾಯಮೂರ್ತಿ ಸಚಿನ ಮಗ್ದುಂ ಅವರಿದ್ದ ವಿಭಾಗೀಯ ಪೀಠ ಈ ಯೋಜನೆ ಹಿನ್ನೆಲೆಯಲ್ಲಿ ದಾಖಲಾದ ಅರ್ಜಿಗಳ ವಿಚಾರಣೆ ನಡೆಸಿ ಈ ಮಹತ್ವದ ಆದೇಶ ನೀಡಿದೆ. … Continued

ಬಡಿಗೆ ಹಿಡಿದು1 ಕಿ.ಮೀ ಅಟ್ಟಾಡಿಸಿಕೊಂಡು ಹೋಗಿ ಚಿರತೆ ಬಾಯಿಂದ ಮಗನನ್ನು ಬಚಾವ್‌ ಮಾಡಿದ ತಾಯಿ..!

ಭೋಪಾಲ: ತಾಯಿ ತನ್ನ ಮಗುವನ್ನು ಎಷ್ಟು ಗಾಢವಾಗಿ ಪ್ರೀತಿಸುತ್ತಾಳೆ, ಅವಳ ಮಮಕಾರ ಎಂಥದ್ದು ಮತ್ತು ಅವಳು ತನ್ನ ಮಗುವನ್ನು ಹೇಗೆ ರಕ್ಷಿಸಿಕೊಳ್ಳುತ್ತಾಳೆ ಎಂಬುದಕ್ಕೆ ಮಧ್ಯಪ್ರದೇಶದ ಹಳ್ಳಿಯೊಂದರಲ್ಲಿ ನಡೆದ ಘಟನೆಯೇ ಉತ್ತಮ ನಿದರ್ಶನ ಬೇರೆ ಸಿಗಲಿಕ್ಕಿಲ್ಲ.. ಬುಡಕಟ್ಟು ಮಹಿಳೆಯೊಬ್ಬರು ಅಗಾಧ ಧೈರ್ಯ ಪ್ರದರ್ಶಿಸಿ ಚಿರತೆಯೊಂದಿಗೆ ಹೋರಾಡಿ ಚಿರತೆ ಬಾಯಿಂದ ತನ್ನ ಮಗುವನ್ನು ರಕ್ಷಿಸಿಕೊಂಡಿದ್ದಾಳೆ..! ತನ್ನ ಮಗನನ್ನು ಚಿರತೆ … Continued

ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಿಟ್ಟ ಸಾವಿರ ಕೋಟಿ ಒಡೆಯ ಕೆಜಿಎಫ್ ಬಾಬು..!

ಬೆಂಗಳೂರು: ರಾಜಕೀಯ ಈ ತರಹ ಇದೆ ಎಂದು ಗೊತ್ತಾಗಿದ್ದರೆ ದೇವರಾಣೆ ರಾಜಕೀಯಕ್ಕೆ ಬರುತ್ತಿರಲಿಲ್ಲ. ಬಂದು ತಪ್ಪು ಮಾಡಿದೆ ಎಂದು ಹೇಳುತ್ತ ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಎಂದು ಕೆಜಿಎಫ್ ಬಾಬು ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಿಟ್ಟಿದ್ದಾರೆ. ನನ್ನ ಪತ್ನಿ, ಮಗಳ ಪ್ರಾಣಕ್ಕೆ ಅಪಾಯ ತರುವ ಸಂಚು ನಡೆದಿತ್ತು. ನವೀದ್ ಎಂಬ ವ್ಯಕ್ತಿ ನನ್ನ ಆಸ್ತಿ ಖರೀದಿ ಮಾಡಿದ್ದ. 300 … Continued

ವಿದ್ಯಾರ್ಥಿಗಳ ಸಫಾರಿ ವಾಹನದ ಮೇಲೆ ಬೃಹತ್ ಆನೆ ದಾಳಿ‌, ವಾಹನ ನುಜ್ಜುಗುಜ್ಜು.. ವಿಡಿಯೊದಲ್ಲಿ ಸೆರೆ

ಪ್ರಿಟೋರಿಯಾ: ಆನೆ ತಾನಾಗಿ ಯಾರ ಸುದ್ದಿಗೂ ಹೋಗುವುದಿಲ್ಲ, ಆದರೆ ಅದನ್ನು ಕೆಣಕಿದರೆ ಅಥವಾ ಅದಕ್ಕೆ ಕಿರಿಕಿರಿ ಮಾಡಿದರೆ ಅದು ಸಿಟ್ಟಿಗೇಳುತ್ತದೆ. ಅದು ಸಿಟ್ಟಿಗೆದ್ದರೆ ಏನೂ ಬೇಕಾದರೂ ಆಗಬಹುದು. ಇಂಥದ್ದೇ ಒಂದು ಘಟನೆ ನಡೆದಿದೆ. ಆನೆ ಕಿರಿಕಿರಯಾಗಿ ವಿದ್ಯಾರ್ಥಿಗಳ ಸಫಾರಿ ವಾಹನದ ಮೇಲೆ ಆನೆ ದಾಳಿಮಾಡಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ದಕ್ಷಿಣ ಆಫ್ರಿಕಾದ ಲಿಂಪೊಪೊ ಪ್ರಾಂತ್ಯದ … Continued

ಭೀಮಾ ಕೋರೆಗಾಂವ್ ಪ್ರಕರಣ: ಸುಧಾ ಭಾರದ್ವಾಜ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್; ಉಳಿದ 8 ಮಂದಿ ಮನವಿ ತಿರಸ್ಕೃತ

ಮುಂಬೈ: ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ, ವಕೀಲರಾದ ಸುಧಾ ಭಾರದ್ವಾಜ್ ಅವರು ಸಲ್ಲಿಸಿದ್ದ ಡಿಫಾಲ್ಟ್ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ಬುಧವಾರ ಅಂಗೀಕರಿಸಿದೆ. ಜಾಮೀನು ಷರತ್ತುಗಳಿಗಾಗಿ ಎನ್‌ಐಎ ವಿಶೇಷ ನ್ಯಾಯಾಲಯ ಸಂಪರ್ಕಿಸುವಂತೆ ಭಾರದ್ವಾಜ್ ಅವರಿಗೆ ಹೈಕೋರ್ಟ್‌ ಸೂಚಿಸಿದೆ. ಇದೇ ವೇಳೆ ಎಂಟು ಆರೋಪಿಗಳಾದ ಪಿ. ವರವರ ರಾವ್, ಸುಧೀರ್ ಧವಳೆ, ರೋನಾ ವಿಲ್ಸನ್, ಸುರೇಂದ್ರ ಗಾಡ್ಲಿಂಗ್, … Continued

ಅಖಿಲೇಶ್ ಬಗ್ಗೆ ವಿವಾದಾತ್ಮಕ ಪೋಸ್ಟ್: ಫೇಸ್‌ಬುಕ್‌ ಸಿಇಓ ವಿರುದ್ಧವೇ ದೂರು ದಾಖಲು..!

ಉತ್ತರಪ್ರದೇಶ: ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ವಿರುದ್ಧ ಅವಹೇಳನಕಾರಿ ಪೋಸ್ಟ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಫೇಸ್‌ಬುಕ್ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಮಾರ್ಕ್ ಜುಕರ್‌ಬರ್ಗ್ ಸೇರಿದಂತೆ 49 ಮಂದಿಯನ್ನು ಹೆಸರಿಸಲಾಗಿದೆ. ಆದಾಗ್ಯೂ, ತನಿಖೆಯ ಸಂದರ್ಭದಲ್ಲಿ ಪೊಲೀಸರು ಜುಕರ್‌ಬರ್ಗ್ ಹೆಸರನ್ನು ನಂತರ ಪ್ರಕರಣದಿಂದ ಕೈಬಿಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ನ್ಯಾಯಾಲಯದ … Continued