ಬೆಂಗಳೂರು: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಸ್ವತಃ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಸಚಿವ ನಾಗೇಶ ಅವರು, ಕೋವಿಡ್-19 ಸೌಮ್ಯ ಲಕ್ಷಣಗಳು ಕಾಣಿಸಿದ ಕಾರಣ ನಾನು ಇಂದು ಪರೀಕ್ಷೆಗೆ ಒಳಪಟ್ಟಿದ್ದು, ಕೋವಿಡ್-19 ವರದಿ ಪಾಸಿಟಿವ್ ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ಕ್ವಾರಂಟೈನ್ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
ಸಚಿವರ ಸಂಪರ್ಕಕ್ಕೆ ಬಂದ ಕೆಲವರು ಈಗಾಗಲೇ ಪರೀಕ್ಷೆ ಮಾಡಿಸಿಕೊಂಡಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ