ಅನುದಾನ ತಾರತಮ್ಯ: ದೇವೇಗೌಡರಿಂದ ಸಿಎಂ ಮನೆ ಮುಂದೆ ಧರಣಿ ಎಚ್ಚರಿಕೆ

ಬೆಂಗಳೂರು: ದಾಸರಹಳ್ಳಿ ಕ್ಷೇತ್ರದ ಅನುದಾನ ತಾರತಮ್ಯದ ಬಗ್ಗೆ ಮುಖ್ಯಮಂತ್ರಿ ಮನೆ ಮುಂದೆ ಧರಣಿ ಕೂರುವುದಾಗಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಿಳಿಸಿದ್ದಾರೆ.
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯ ಶಾಸಕ ಮಂಜುನಾಥ್ ಅವರೊಂದಿಗೆ, ಹದಗೆಟ್ಟಿರುವ ವಿವಿಧ ರಸ್ತೆಗಳನ್ನು ವೀಕ್ಷಣೆ ಮಾಡಿ ನಂತರ ಮಾತನಾಡಿದ ಅವರು, ದಾಸರಹಳ್ಳಿ ಕ್ಷೇತ್ರಕ್ಕೆ ಅನುದಾನದ ತಾರತಮ್ಯ ಮಾಡಲಾಗುತ್ತಿದೆ. ದಾಸರಹಳ್ಳಿ ಕ್ಷೇತ್ರದ ಜನಪರವಾಗಿದ್ದು, ಅಭಿವೃದ್ಧಿ ಆಗುವವರೆಗೂ ಹೋರಾಟ ಮಾಡುತ್ತೇನೆ. ಮುಖ್ಯಮಂತ್ರಿ ಬಳಿ ಹೋಗಿ ಅನುದಾನ ನೀಡುವಂತೆ ಮನವಿ ಮಾಡುತ್ತೇನೆ. ಒಂದು ವೇಳೆ ರಾಜಕೀಯ ಮಾಡಿದರೆ ಮುಖ್ಯಮಂತ್ರಿಗಳ ಮನೆ ಮುಂದೆ ಧರಣಿ ಕೂರುತ್ತೇನೆ ಎಂದು ತಿಳಿಸಿದರು.
ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್ ಏನು ಮಾಡಿದೆ, ಬಿಜೆಪಿ ಏನು ಮಾಡಿದೆ, ಜೆಡಿಎಸ್ ಏನು ಮಾಡಿದೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ದ ಎಂದು ದೇವೇಗೌಡರು ತಿಳಿಸಿದರು.

5 / 5. 1

ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ ; ಎಚ್‌.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನದ ಭೀತಿ

ನಿಮ್ಮ ಕಾಮೆಂಟ್ ಬರೆಯಿರಿ

advertisement