ದೇವಾಲಯದ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ

ಕೋಲಾರ: ದೇವಾಲಯದಲ್ಲಿ ವಿತರಿಸಿದ ಪ್ರಸಾದ ಸೇವಿಸಿ ಭಕ್ತರು ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಬೀಗರಾಯನಹಳ್ಳಿಯಲ್ಲಿ ನಡೆದಿದೆ.
ಹಳ್ಳಿಯ ಗಂಗಮ್ಮ ದೇವಾಲಯದಲ್ಲಿ ಶನಿವಾರ ಹೊಸ ವರ್ಷಾಚರಣೆಯ ಅಂಗವಾಗಿ ವಿಶೇಷ ಪೂಜೆ ನಡೆದಿತ್ತು. ನಂತರದಲ್ಲಿ ದೇವಾಲಯದ ಆಡಳಿತ ಮಂಡಳಿ ಮಾಡಿಸಿದ ಪ್ರಸಾದವನ್ನು ಭಕ್ತರಿಗೆ ವಿತರಿಸಲಾಯಿತು.
ಪ್ರಸಾದದ ರೂಪದಲ್ಲಿ ಚಿತ್ರಾನ್ನ ಹಾಗೂ ಕೇಸರಿಬಾತ್ ಸೇವಿಸಿದ ನಂತರ ಭಕ್ತರು ಅಸ್ವಸ್ಥಗೊಂಡಿದ್ದಾರೆ. 50ಕ್ಕೂ ಹೆಚ್ಚು ಜನರನ್ನು ಶ್ರೀನಿವಾಸಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಸ್ವಸ್ಥತರ ಪೈಕಿ 12 ಮಕ್ಕಳು, 30 ಕ್ಕೂ ಹೆಚ್ಚು ಪುರುಷರು ಹಾಗೂ ಮಹಿಳೆಯರು ಇದ್ದಾರೆ. ಈಗಾಗಲೇ ಭಕ್ತರು ಗುಣಮುಖರಾಗಿ ಮನೆಗಳತ್ತ ತೆರಳುತ್ತಿದ್ದಾರೆ. ಸ್ಥಳಕ್ಕೆ ಟಿಹೆಚ್ಒ, ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

 

0 / 5. 0

ಪ್ರಮುಖ ಸುದ್ದಿ :-   ಕರ್ನಾಟಕ ಬಿಜೆಪಿ ಹಂಚಿಕೊಂಡ ಅನಿಮೇಟೆಡ್ ವೀಡಿಯೊ ತೆಗೆದುಹಾಕಿ ; ಎಕ್ಸ್​ ಗೆ ಚುನಾವಣಾ ಆಯೋಗ ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement