ಪಿಎಂ ಕಿಸಾನ್ ಯೋಜನೆ ಫಲಾನುಭವಿಗಳಿಗೆ 1007.18 ಕೋಟಿ ರೂ. ಬಿಡುಗಡೆ ರಾಜ್ಯ ಸರ್ಕಾರ

ಬೆಂಗಳೂರು: ಪಿಎಂ ಕಿಸಾನ್ ಕರ್ನಾಟಕ ಯೋಜನೆಯಡಿ ಪಿಎಂ-ಕಿಸಾನ್ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ವಾರ್ಷಿಕ 4 ಸಾವಿರ ರೂ. ನೆರವು ನೀಡುವ ಯೋಜನೆಯಡಿ ಈ ಆರ್ಥಿಕ ವರ್ಷದ ಎರಡನೇ ಕಂತಿನ ನೆರವಿಗಾಗಿ ರಾಜ್ಯ ಸರ್ಕಾರ 1007.18 ಕೋಟಿ ರೂ. ಬಿಡುಗಡೆ ಮಾಡಿದೆ. ಅದನ್ನು, ರೈತರ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 10ನೇ ಕಂತಿನ ನೆರವು ಬಿಡುಗಡೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇಂದು ರಾಜ್ಯದ 34.26 ಲಕ್ಷ ರೈತರಿಗೆ 685.28 ಕೋಟಿ ರೂ.ಗಳಷ್ಟು ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ಒಟ್ಟು 54.52 ಲಕ್ಷ ರೈತರು ಈ ವರೆಗೆ ಕನಿಷ್ಠ ಒಂದು ಕಂತಿನ ನೆರವನ್ನು ಪಡೆದಿದ್ದಾರೆ. ಈ ಯೋಜನೆಯಡಿ ಕೇಂದ್ರ ಸರ್ಕಾರವು ಒಟ್ಟು 8022.69 ಕೋಟಿ ರೂ. ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರವು 2850.54 ಕೋಟಿ ಬಿಡುಗಡೆ ಮಾಡಿದೆ.

ಇದೇ ಸಂದರ್ಭದಲ್ಲಿ ರಾಜ್ಯದ 30 ರೈತ ಉತ್ಪಾದಕ ಸಂಸ್ಥೆಗಳಿಗೆ 1.21 ಕೋಟಿ ರೂ. ನೆರವು ಬಿಡುಗಡೆ ಮಾಡಲಾಯಿತು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

0 / 5. 0

  1. ಗಣpati

    ರಾಜ್ಯ ಸರಕಾರದ ಹಣ ರೈತರಿಗೆ ಯಾವಾಗ ಸಿಗುತ್ತೆ?

ನಿಮ್ಮ ಕಾಮೆಂಟ್ ಬರೆಯಿರಿ

advertisement