ಹುಬ್ಬಳ್ಳಿಯಲ್ಲಿ ಜನೇವರಿ ೩, ೪ರಂದು ಉತ್ತರ ಪ್ರಾಂತ ರೈತ ಸಮ್ಮೇಳನ

ಹುಬ್ಬಳ್ಳಿ: ಭಾರತೀಯ ಕಿಸಾನ್ ಸಂಘದ ಉತ್ತರ ಪ್ರಾಂತ ಘಟಕವು ಜನೇವರಿ ೩ ಮತ್ತು ೪ ರಂದು ಉತ್ತರ ಪ್ರಾಂತ ರೈತ ಸಮ್ಮೇಳನ-೨೦೨೨ ಗೋಕುಲ ರಸ್ತೆಯ ಹೆಬಸೂರ ಭವನದಲ್ಲಿ ನಡೆಯಲಿದೆ.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಸಮ್ಮೇಳನದ ಸಂಚಾಲಕ ರಮೇಶ ಕೊರವಿ ಮಾಹಿತಿ ನೀಡಿದರು. ಜನೇವರಿ ೩ ರಂದು ಬೆಳಿಗ್ಗೆ ೧೦:೩೦ಕ್ಕೆ ಗೋ ಪೂಜೆ ಮತ್ತು ಧ್ವಜಾರೋಹಣದ ನಂತರ ಕಾರ್ಯಕ್ರಮವನ್ನು ೮೦೦ ದೇಶಿ ಗೋವುಗಳ ಸಂರಕ್ಷರ ಭರಮಣ್ಣ ಗುರಿಕಾರ ಉದ್ಘಾಟಿಸಲಿದ್ದು, ಗದಗ ಶಿವಾನಂದ ಮಠದ ಶ್ರೀ ಸದಾಶಿವಾನಂದ ಮಹಾಸ್ವಾಮೀಜಿ ಸಾನಿಧ್ಯ ವಹಿಸುವರು. ಭಾರತೀಯ ಕಿಸಾನ್ ಸಂಘದ ಉತ್ತರ ಪ್ರಾಂತ ಅಧ್ಯಕ್ಷ ಗುರುನಾಥ ಬಗಲಿ ಅಧ್ಯಕ್ಷತೆ ವಹಿಸಲಿದ್ದಾರೆ. ಭಾರತೀಯ ಕಿಸಾನ್ ಸಂಘದ ಅಖಿಲ ಭಾರತ ಅಧ್ಯಕ್ಷ ಐ.ಎನ್.ಬಸವೇಗೌಡ, ಸಂಘದ ರಾಜ್ಯಾಧ್ಯಕ್ಷ ಪುಟ್ಟಸ್ವಾಮಿಗೌಡ ಮತ್ತು ಸಂಘದ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ದೊಣೂರ ರಾಮು ಅತಿಥಿಗಳಾಗಿ ಪಾಲ್ಗೊಳ್ಳುವರು. ಸಂಘದ ಪ್ರಾಂತ ಕಾರ್ಯಕಾರಿಣಿ ಸದಸ್ಯ ವೀರಣ್ಣ ಮಜ್ಜಗಿ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ.

ಜನೇವರಿ ೪ರಂದು ಮಧ್ಯಾಹ್ನ ೧ ಗಂಟೆಗೆ ಸಮಾರೋಪ ಮತ್ತು ಪ್ರಾಂತ ಸಮಿತಿ ಘೋಷಣೆ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ
ಉತ್ತರ ಪ್ರಾಂತ ಅಧ್ಯಕ್ಷ ಗುರುನಾಥ ಬಗಲಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಘದ ರಾಷ್ಟ್ರೀಯ ಅಧ್ಯಕ್ಷ ಐ.ಎನ್. ಬಸವೇಗೌಡ, ಅಖಿಲ ಭಾರತೀಯ ಕಾರ್ಯಕಾರಿಣಿ ಸದಸ್ಯೆ ವೀಣಾ ಸತೀಶ, ರಾಜ್ಯಾಧ್ಯಕ್ಷ ಪುಟ್ಟಸ್ವಾಮಿಗೌಡ, ಕರ್ನಾಟಕ ಪ್ರದೇಶ ಉಪಾಧ್ಯಕ್ಷ ಭೀಮಸೇನಾ ಕೋಕರೆ ಮತ್ತು ಕರ್ನಾಟಕ ಉತ್ತರ ಪ್ರಾಂತ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಜಾಗಿರದಾರ ಭಾಗವಹಿಸುವರು ಎಂದು ಮಾಹಿತಿ ನೀಡಿದರು.
ವಿವೇಕ ಮೋರೆ ಮಾತನಾಡಿ , ೧೪ ಜಿಲ್ಲೆಗಳಿಂದ ೫೦೦ ರಷ್ಟು ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಗಂಗಾಧರ ಕಾಸರಘಟ್ಟ, ಪ್ರಾಂತ ಕಾರ್ಯಕಾರಿಣಿ ಸದಸ್ಯ ವೀರಣ್ಣ ಮಜ್ಜಗಿ ಮತ್ತು ಮಂಜುನಾಥ ಗೌರಿ ಇದ್ದರು.

ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement