ಫ್ರಾನ್ಸ್‌ನಲ್ಲಿ ಕೊರೊನಾ ಸುನಾಮಿ…ಸತತ ನಾಲ್ಕನೇ ದಿನ ಎರಡು ಲಕ್ಷಕ್ಕಿಂತ ಹೆಚ್ಚು ಕೊರೊನಾ ಸೋಂಕು ದಾಖಲು..!

ಪ್ಯಾರಿಸ್: ಕಳೆದ ೨೪ ಗಂಟೆಗಳ ಅವಧಿಯಲ್ಲಿ ಫ್ರಾನ್ಸ್‌ನಲ್ಲಿ ಹೊಸದಾಗಿ ೨,೧೯,೧೨೬ ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಸತತ ನಾಲ್ಕನೇ ದಿನವೂ ಎರಡು ಲಕ್ಷಕ್ಕೂ ಹೆಚ್ಚು ಮಂದಿಗೆ ಸೋಂಕುಗಳು ದೇಶದಲ್ಲಿ ಕಾಣಿಸಿಕೊಂಡಿದೆ. ಫ್ರಾನ್ಸ್ ನಲ್ಲಿ ಈಗ ಒಟ್ಟಾರೆ ಒಂದು ಕೋಟಿಗೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ.
ಈಗ ಫ್ರಾನ್ಸ್‌ ಒಂದು ಕೋಟಿಗೂ ಅಧಿಕ ಸೋಂಕು ದಾಖಲಾಗಿರುವ ವಿಶ್ವದ ಆರನೇ ದೇಶವಾಗಿದೆ. ಇದಕ್ಕೂ ಮುನ್ನ ಅಮೆರಿಕ, ಭಾರತ, ಬ್ರೆಜಿಲ್, ಬ್ರಿಟನ್ ಮತ್ತು ರಷ್ಯಾದಲ್ಲಿ ಈಗಾಗಲೇ ಒಂದು ಕೋಟಿಗೂ ಅಧಿಕ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ದೇಶಗಳ ಸಾಲಿಗೆ ಈಗ ಫ್ರಾನ್ಸ್ ಕೂಡ ಹೊಸದಾಗಿ ಸೇರ್ಪಡೆಯಾಗಿದೆ.
ಕ್ರಿಸ್ಮಸ್ ಆಚರಣೆ ಮತ್ತು ಹೊಸ ವರ್ಷ ಆಚರಣೆಯ ಬಳಿಕ ಫ್ರಾನ್ಸಿನಲ್ಲಿ ಸೋಂಕು ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಸೋಂಕು ತಡೆಗೆ ದೇಶದ ಜನ ಮುನ್ನೆಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಎಂದು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯಲ್ ಮ್ಯಾಕ್ರಾನ್ ಎಚ್ಚರಿಸಿದ್ದಾರೆ.
ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ದಿನದಿಂದ ದಿನಕ್ಕೆ ಸೋಂಕು ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನೆಲ್ಲ ಗಮನಿಸಿದರೆ ದೇಶದಲ್ಲಿ ಮತ್ತೊಮ್ಮೆ ಕಠಿಣ ನಿಯಮಗಳನ್ನು ಜಾರಿಗೆ ತರುವ ಕಾಲ ದೂರವಿಲ್ಲ ಅದಕ್ಕೆ ಜನರು ಅವಕಾಶ ಮಾಡಿಕೊಡದಂತೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು, ಹೆಚ್ಚು ಜನಸಂದಣಿ ಇರುವ ಪ್ರದೇಶಗಳಿಗೆ ತೆರಳದಂತೆ ತಮಗೆ ತಾವೇ ನಿರ್ಬಂಧ ಹಾಕಿಕೊಳ್ಳಬೇಕು. ಅದರಲ್ಲಿಯೂ ೬ರಿಂದ ೧೧ ವರ್ಷ ವಯೋಮಾನದ ಮಕ್ಕಳನ್ನು ಸಾರ್ವಜನಿಕ ಸ್ಥಳಗಳಿಗೆ ಕರೆದೊಯ್ಯದಂತೆ ಮುನ್ನೆಚ್ಚರಿಕೆ ವಹಿಸಿ ಎಂದು ತಿಳಿಸಿದ್ದಾರೆ.
ಜನರು ಮಾರ್ಗಸೂಚಿಯನ್ನು ಉಲ್ಲಂಘಿಸಿದರೆ ಕೋವಿಡ್ ಸೋಂಕು ಸಂಖ್ಯೆ ಈ ತಿಂಗಳಲ್ಲಿ ಐದು ಪಟ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಅದಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ಫ್ರಾನ್ಸ್‌ ಅಧ್ಯಕ್ಷರು ಮನವಿ ಮಾಡಿದ್ದಾರೆ

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ತನ್ನ ಕೆಲಸ ಬಿಟ್ಟ ಪೋಷಕರಿಗೆ ಪೂರ್ಣ ಸಮಯದ ಮಗಳಾದ ಚೀನಾ ಮಹಿಳೆ, ಅವಳಿಗೆ ತಿಂಗಳಿಗೆ 47,000 ರೂ. ಸಂಬಳ...!

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement