ಕರ್ನಾಟಕದಲ್ಲಿ ಕೊರೊನಾ 3ನೇ ಅಲೆ ಭೀತಿ: ಲಾಕ್​ಡೌನ್ ಸುಳಿವು ಕೊಟ್ಟ ಸಚಿವ ಅಶೋಕ್

ಬೆಂಗಳೂರು: ಜನ ನಿರ್ಲಕ್ಷ್ಯ ವಹಿಸಿದರೆ ಮುಂಬೈ, ದೆಹಲಿ, ಪಶ್ಚಿಮ ಬಂಗಾಳದ ರೀತಿ ಲಾಕ್ ಡೌನ್ ಮಾಡಬೇಕಾಗುತ್ತದೆ ಎಂದು ಸಚಿವ ಆರ್. ಅಶೋಕ್ ಎಚ್ಚರಿಸಿದ್ದು, ಪರೋಕ್ಷವಾಗಿ ಲಾಕ್ ಡೌನ್ ಬಗ್ಗೆ ಸುಳಿವು ನೀಡಿದ್ದಾರೆ.
ಮುಖ್ಯಮಂತ್ರಿ ಬೊಮ್ಮಾಐಇ ಜೊತೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಮೂರನೇ ಅಲೆ ಬಗ್ಗೆ ಮುಖ್ಯಮಂತ್ರಿಗಳುಮತ್ತೊಮ್ಮೆ ಸಭೆ ಮಾಡುತ್ತಾರೆ ಎಂದು ತಿಳಿಸಿದರು.

ಕರ್ನಾಟಕದ ಇತರ ಜಿಲ್ಲೆಗಳ ಪರಿಸ್ಥಿತಿ ಒಂದು ಥರ ಇದ್ದರೆ ಬೆಂಗಳೂರಿನಲ್ಲಿ ಮತ್ತೊಂದು ರೀತಿಯಿದೆ. ಬೆಂಗಳೂರು ರೆಡ್ ಜೋನ್ ಎಂದು ಕೇಂದ್ರ ಸರ್ಕಾರ ಹೇಳಿದೆ. ಹೀಗಾಗಿ ಮುಖ್ಯಮಂತ್ರಿ ಬೊಮ್ಮಾಯಿ ಮತ್ತೊಮ್ಮೆ ಸಭೆ ಕರೆದು ಕಠಿಣ ನಿಯಮಗಳ ಬಗ್ಗೆ ನಿರ್ಧಾರ ಮಾಡಬಹುದು. ತಜ್ಞರ ಸಮಿತಿ ನೀಡುವ ಸಲಹೆಗಳನ್ನು ಯಥಾವತ್ತಾಗಿ ಜಾರಿಮಾಡಲಾಗುತ್ತದೆ. ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಿ, ಸಭೆ ನಡೆಸಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ. ತಜ್ಞರ ಸೂಚನೆಗಳನ್ನು ಯಥಾವತ್ತಾಗಿ ಪಾಲನೆ ಮಾಡುತ್ತೇವೆ. 2ನೇ ಅಲೆಯಲ್ಲಿ ಆದಂತೆ ಈ ಬಾರಿ ಆಗುವುದಿಲ್ಲ. ಈ ಬಾರಿ ಸರ್ವಸನ್ನದ್ಧರಾಗಿದ್ದೇವೆ ಎಂದು ಭರವಸೆ ನೀಡಿದರು.
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ನವರು ಏನು ಮಾಡುತ್ತಾರೆನ್ನುವುದು ನಮಗೆ ಮಹತ್ವದ್ದಲ್ಲ. ನಮಗೆ ಆದ್ಯತೆ ಇರುವುದು ರಾಜ್ಯದ ಆರೂವರೆ ಕೋಟಿ ಜನರ ಜೀವ ಕಾಪಾಡುವುದು. ಹೀಗಾಗಿ ಜನವರಿ 4 ಅಥವಾ 5 ರಂದು ಸಭೆ ಮಾಡಿ ಕೊವೀಡ್ ತಡೆಗೆ ಬಿಗಿ ಕಠಿಣ ನಿಯಮ ಜಾರಿ ಬಗ್ಗೆ ನಿರ್ಧಾರ ಮಾಡಲಾಗುತ್ತದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement