ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ಸಾವು

ಗುಂಡ್ಯ(ದಕ್ಷಿಣ ಕನ್ನಡ): ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಸಂಭವಿಸಿದ ಬಗ್ಗೆ ವರದಿಯಾಗಿದೆ.
ಕಾರಿನಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಕೆಳಗಿಳಿದು ಪರಿಶೀಲಿಸುತ್ತಿದ್ದಾಗಲೇ ಮರಬಿದ್ದಿದ್ದರಿಂದ ಕಾರು ಚಾಲಕ ಸುರೇಶ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದು, ಮಹಿಳೆ ಹಾಗೂ ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 75ರ ಮೂಲಕ ಬೆಂಗಳೂರು ಕಡೆಗೆ ತೆರಳುತ್ತಿದ್ದಾಗ ಶಬ್ದ ಕೇಳಿಬಂದ ಹಿನ್ನೆಲೆಯಲ್ಲಿ ಚಾಲಕ ಸುರೇಶ ಕಾರನ್ನು ನಿಲ್ಲಿಸಿ ಬಾನೆಟ್ ತೆಗೆದು ಪರಿಶೀಲನೆ ನಡೆಸುತ್ತಿದ್ದರು. ಅದೇ ವೇಳೆ ರಸ್ತೆ ಬದಿಯಲ್ಲಿದ್ದ ಮರವು ಅವರ ಮೇಲೆ ಬಿದ್ದಿದೆ. ಘಟನೆಯಲ್ಲಿ ಕಾರು ಜಖಂಗೊಂಡಿದೆ. ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

0 / 5. 0

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement