ಜನರು ಕೊರೊನಾ ನಿಯಮ ಪಾಲಿಸದಿದ್ದರೆ ಕಠಿಣ ಕ್ರಮ ಅನಿವಾರ್ಯವಾಗಲಿದೆ: ಸಿಎಂ ಬೊಮ್ಮಾಯಿ

ಬೆಳಗಾವಿ: ಜನರು ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ಜನರು ಸಹಕಾರ ನೀಡಿದರೆ ಲಾಕ್‌ಡೌನ್‌ ಇರುವುದಿಲ್ಲ. ಒಂದು ವೇಳೆ ಜನರು ಕೊರೊನಾ ನಿಯಮಗಳನ್ನು ಅನುಸರಿಸದಿದ್ದರೆ ಲಾಕ್‌ಡೌನ್‌ ಅನಿವಾರ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವಾರದಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಓಮಿಕ್ರಾನ್‌ ಪ್ರಕರಣಗಳು ಸಹ ಹೆಚ್ಚಳವಾಗುತ್ತಿದೆ. ಪಕ್ಕದ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಹಾರಾಷ್ಟ್ರ ಹಾಗೂ ಕೇರಳ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಲಾಗಿದೆ.
ಮುಂಬೈ ಮಾದರಿಯಲ್ಲಿ ಕಠಿಣ ಕ್ರಮ ಕೈಗೊಳ್ಳುವ ಕುರಿತು ನಾಳೆ ಅಥವಾ ನಾಡಿದ್ದು ಬೆಂಗಳೂರಿನಲ್ಲಿ ಸಭೆ ನಡೆಸಿ ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಈಗಿರುವ ನೈಟ್ ಕರ್ಫ್ಯೂ ಮುಂದುವರಿಸುವ ಬಗ್ಗೆಯೂ ಚರ್ಚಿಸಲಾಗುವುದು ಎಂದು ಮಾಹಿತಿ ನೀಡಿದರು.
ಒಂದು ವಾರದಲ್ಲಿ ಇಡೀ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ವಿಶೇಷವಾಗಿ ಮುಂಬೈನಲ್ಲಿ ಅತಿ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿವೆ. ಬೆಂಗಳೂರಿನಲ್ಲೂ ದೊಡ್ಡ ಪ್ರಮಾಣದಲ್ಲಿ ಸೋಂಕು ಹರಡುತ್ತಿದೆ. ಸಚಿವ ಆರ್. ಅಶೋಕ ಲಾಕ್‌ಡೌನ್ ಬಗ್ಗೆ ಮಾತನಾಡಿದ್ದಾರೆ. ನಮ್ಮ ನಿಲುವಿನಲ್ಲಿ ಸ್ಪಷ್ಟತೆ ಇದೆ. ಹಿಂದೆ ಲಾಕ್‌ಡೌನ್ ಆಗಿತ್ತು. ಅದು ಆಗಬಾರದು ಎಂದು ಈಗ ಕಟ್ಟುನಿಟ್ಟಿನ ತೀರ್ಮಾನ ತೆಗೆದುಕೊಳ್ಳಲಾಗಿದೆ. ಆರ್. ಅಶೋಕ ಸಹ ಅದನ್ನೇ ಹೇಳಿದ್ದಾರೆ. ಜನರು ಅದಕ್ಕೆ ಸಹಕಾರ ಕೊಟ್ಟರೆ ಲಾಕ್‌ಡೌನ್ ಆಗುವುದಿಲ್ಲ ಎಂದರು.
ಮಹಾರಾಷ್ಟ್ರದಿಂದ ಬೆಳಗಾವಿ ಗಡಿ ಪ್ರವೇಶಿಸುವ ಪ್ರದೇಶಗಳಲ್ಲಿ ನಿಗಾ ಇಡಲಾಗಿದೆ. ಕರ್ನಾಟಕಕ್ಕೆ ಬರುವವರಿಗೆ ಎರಡು ಡೋಸ್ ಲಸಿಕೆ ಮತ್ತು ಹಾಗೂ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. ಅಂಥವರಿಗೆ ಮಾತ್ರ ಪ್ರವೇಶ ಇರಲಿದೆ ಎಂದು ಅವರು ತಿಳಿಸಿದರು.

ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ ; ಎಚ್‌.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನದ ಭೀತಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement