ಚೆನ್ನೈ: ತಮಿಳುನಾಡಿನ ಪೆರುಂಗುಡಿಯಲ್ಲಿ ಹನ್ನೊಂದು ವರ್ಷ ಮತ್ತು ಒಂದು ವರ್ಷದ ಮಗು ಸೇರಿದಂತೆ ನಾಲ್ಕು ಜನರ ಕುಟುಂಬವು ಅವರ ಮನೆಯೊಳಗೆ ಶವವಾಗಿ ಪತ್ತೆಯಾಗಿದೆ.
ಮಣಿಕಂದನ್ ಎಂದು ಗುರುತಿಸಲಾದ ವ್ಯಕ್ತಿ ರಾಮಪುರಂನಲ್ಲಿರುವ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅವರು 35 ವರ್ಷದ ತಾರಾ ಅವರನ್ನು ವಿವಾಹವಾಗಿದ್ದು, ದಂಪತಿಗೆ ಇಬ್ಬರು ಗಂಡು ಮಕ್ಕಳು.
36ರ ಹರೆಯದ ವ್ಯಕ್ತಿ ಸಿಟ್ಟಿನಿಂದ ಪತ್ನಿಗೆ ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ನಂತರ ಇದರಿಂದ ನೊಂದು ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಸಾಯಿಸಿ, ಅಡುಗೆಮನೆಯಲ್ಲಿನ ಕೊಕ್ಕೆಯಿಂದ ನೇಣು ಹಾಕಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಪೆರುಂಗುಡಿಯಲ್ಲಿರುವ ಅಪಾರ್ಟ್‌ಮೆಂಟ್ ಸಮುಚ್ಚಯದೊಳಗೆ ಮೃತ ದೇಹಗಳಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಅಧಿಕಾರಿಗಳ ಪ್ರಕಾರ, ತಾರಾ ಅವರ ತಲೆಗೆ ತೀವ್ರ ಗಾಯಗಳಾಗಿದ್ದು, ಇಬ್ಬರು ಮಕ್ಕಳು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಮಣಿಕಂದನ್ ಅಡುಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಪೊಲೀಸರು ನೆರೆಹೊರೆಯವರು ಮತ್ತು ವ್ಯಕ್ತಿಯ ಸಹೋದ್ಯೋಗಿಯನ್ನು ವಿಚಾರಿಸಿದಾಗ ಮಣಿಕಂದನ್ ತನ್ನ ಸ್ನೇಹಿತರಿಂದ ಹಣವನ್ನು ಎರವಲು ಪಡೆದಿದ್ದರು ಎಂದು ತಿಳಿದುಬಂದಿದೆ. ಅವರು ತಮ್ಮ ಕೆಲಸದಲ್ಲಿ ಅನಿಯಮಿತರಾಗಿದ್ದರು ಮತ್ತು ಮನೆಯಲ್ಲಿ ಕಂಪ್ಯೂಟರ್ ಮುಂದೆ ಹೆಚ್ಚು ಸಮಯ ಕಳೆಯುತ್ತಿದ್ದರು ಎಂದು ವರದಿಯಾಗಿದೆ. ಮಣಿಕಂದನ್ ಆನ್‌ಲೈನ್ ಜೂಜಾಟದ ಚಟ ಹೊಂದಿದ್ದ ಎನ್ನಲಾಗಿದ್ದು, ಇದು ಈ ಕಾರಣಕ್ಕೆ ಅವರ ಪತ್ನಿಯ ನಡುವೆ ಜಗಳಕ್ಕೆ ಕಾರಣವಾಗಿತ್ತು.
ಮೃತದೇಹಗಳು ಪತ್ತೆಯಾದ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ