ಭಾರತೀಯ ಸೇನಾಪಡೆಯಿಂದ ಶ್ರೀನಗರದಲ್ಲಿ ಎಲ್​ಇಟಿ ಉನ್ನತ ಕಮಾಂಡರ್, ಪಾಕಿಸ್ತಾನಿ ಉಗ್ರನ ಹತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಶಾಲಿಮಾರ್‌ನಲ್ಲಿ ಭದ್ರತಾ ಪಡೆಗಳು ಸೋಮವಾರ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಉಗ್ರರಲ್ಲಿ ಒಬ್ಬನಾದ ಸಲೀಂ ಪರ್ರೆ ಎಂಬಾತ ಲಷ್ಕರ್ ಇ ತೈಬಾ (ಎಲ್‌ಇಟಿ) ಕಮಾಂಡರ್ ಆಗಿದ್ದ. ಇನ್ನೊಬ್ಬ ಭಯೋತ್ಪಾದಕನನ್ನು ಪಾಕಿಸ್ತಾನದ ಹಫೀಜ್ ಅಲಿಯಾಸ್ ಹಮ್ಜಾ ಎಂದು ಗುರುತಿಸಲಾಗಿದ್ದು, ಆತ ಬಂಡಿಪೋರಾದಲ್ಲಿ ಇಬ್ಬರು ಪೊಲೀಸರ ಹತ್ಯೆಯಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. … Continued

ತಾಲಿಬಾನಿಗೆ ಆರ್‌ಎಸ್‌ಎಸ್ ಹೋಲಿಕೆ ಮಾಡಿ ಹೇಳಿಕೆಗೆ ತಮ್ಮ ವಿರುದ್ಧ ದಾಖಲಾದ ಮಾನನಷ್ಟ ಮೊಕದ್ದಮೆ ವಜಾ ಕೋರಿ ಥಾಣೆ ಕೋರ್ಟಿಗೆ ಅರ್ಜಿ ಸಲ್ಲಿಸಿದ ಅಖ್ತರ್‌

ಆರ್‌ಎಸ್‌ಎಸ್ ಅನ್ನು ತಾಲಿಬಾನ್‌ನೊಂದಿಗೆ ಹೋಲಿಸಿದ ಆರೋಪದ ಮೇಲೆ ತನ್ನ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯನ್ನು ವಜಾಗೊಳಿಸುವಂತೆ ಬಾಲಿವುಡ್ ಗೀತರಚನೆಕಾರ ಜಾವೇದ್ ಅಖ್ತರ್ ಸೋಮವಾರ ಪಕ್ಕದ ಥಾಣೆ ಜಿಲ್ಲೆಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. 76 ವರ್ಷ ವಯಸ್ಸಿನ ಕವಿ-ಗೀತರಚನೆಕಾರ ಅಖ್ತರ್‌ ಮೊಕದ್ದಮೆಯನ್ನು ಮಾನನಷ್ಟಕ್ಕೆ ಅರ್ಹವಲ್ಲದ” ಎಂದು ಪ್ರಕರಣ ಎಂದು ಹೇಳಿದ್ದಾರೆ. ಪ್ರಕರಣವನ್ನು ತಮ್ಮನ್ನು”ಬೆದರಿಸಲು ಮತ್ತು ತೊಂದರೆ ಕೊಡಲು … Continued

ರಿವಾಲ್ವರ್ ಪ್ರಕರಣ: ಶಾಸಕ ಸೋಮಶೇಖರ ರೆಡ್ಡಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

ಬೆಂಗಳೂರು: ಎರಡು ವರ್ಷಗಳಿಗೂ ಹೆಚ್ಚು ಕಾಲ ಪರವಾನಗಿ ನವೀಕರಿಸದೆ ರಿವಾಲ್ವರ್ ಇರಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಬಳ್ಳಾರಿಯ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಶಸ್ತ್ರಾಸ್ತ್ರ ಕಾಯಿದೆ ಅಡಿ ದಾಖಲಾಗಿರುವ ಪ್ರಕರಣ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ಸೋಮವಾರ ನಿರಾಕರಿಸಿದೆ. ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ … Continued

ಮಹಾರಾಷ್ಟ್ರದಲ್ಲಿ ಸೋಮವಾರ 12,160 ಹೊಸ ಕೋವಿಡ್ ಪ್ರಕರಣಗಳು ದಾಖಲು

ಮುಂಬೈ: ಸೋಮವಾರ, ಜನವರಿ 3 ರಂದು ಮಹಾರಾಷ್ಟ್ರದಲ್ಲಿ 12,160 ಹೊಸ ಕೋವಿಡ್‌-19 ಪ್ರಕರಣಗಳು ದಾಖಲಾಗಿವೆ. ಇದೇ ಸಮಯದಲ್ಲಿ 1,748 ರೋಗಿಗಳು ಬಿಡುಗಡೆಯಾಗಿದ್ದಾರೆ; 65,14,358 ಕೋವಿಡ್‌-19 ರೋಗಿಗಳು ಪೂರ್ಣ ಚೇತರಿಕೆಯ ನಂತರ ಇಂದಿನವರೆಗೆ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ ಇಂದು 11 ಕೋವಿಡ್ ಸಾವುಗಳು ವರದಿಯಾಗಿವೆ. ಪ್ರಕರಣದ ಸಾವಿನ ಪ್ರಮಾಣವು ರಾಜ್ಯದಲ್ಲಿ 2.1% ಆಗಿದೆ. ಮಹಾರಾಷ್ಟ್ರದಲ್ಲಿ ಈಗ ಸೋಂಕಿನ 52,422 … Continued

ಲಖಿಂಪುರ್ ಖೇರಿ ಪ್ರಕರಣ: ಆಶಿಶ್ ಮಿಶ್ರಾ ಪ್ರಧಾನ ಆರೋಪಿ, 5,000 ಪುಟಗಳ ಆರೋಪ ಪಟ್ಟಿ ಸಲ್ಲಿಸಿದ ಪೊಲೀಸರು

ಲಖಿಂಪುರ ಖೇರಿ (ಯುಪಿ): ಕೃಷಿ ಕಾಯಿದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಸೇರಿದಂತೆ ಎಂಟು ಜನರ ಮೇಲೆ ವಾಹನ ಹರಿಸಿ ಅವರ ಹತ್ಯೆಗೆ ಕಾರಣವಾದ ಲಖಿಂಪುರ್ ಖೇರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು 5,000 ಪುಟಗಳ ಆರೋಪ ಪಟ್ಟಿ ಸಲ್ಲಿಸಿದ್ದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ … Continued

ತಾಯಿ ಅಂತ್ಯಕ್ರಿಯೆಗೂ ಬಾರದ ಪುತ್ರರು: ಪುತ್ರಿಯರಿಂದಲೇ ಅಂತಿಮ ವಿಧಿವಿಧಾನ

ಪುರಿ: ಒಡಿಶಾದ ಪುರಿಯಲ್ಲಿ ತಮ್ಮ ಇಬ್ಬರು ಸಹೋದರರು ಅಂತ್ಯಕ್ರಿಯೆಗೆ ಬಾರದ ಹಿನ್ನೆಲೆಯಲ್ಲಿ ನಾಲ್ವರು ಮಹಿಳೆಯರು ತಮ್ಮ ತಾಯಿಯ ಮೃತದೇಹವನ್ನು 4 ಕಿಲೋಮೀಟರ್ ವರೆಗೆ ಸ್ಮಶಾನಕ್ಕೆ ಭುಜದ ಮೇಲೆ ಹೊತ್ತುಕೊಂಡು ಹೋಗಿ ಅಂತಿಮ ವಿಧಿಗಳನ್ನು ನೆರವೇರಿಸಿದ್ದಾರೆ. ಗಂಡು ಮಕ್ಕಳು ಪೋಷಕರ ಅಂತ್ಯಕ್ರಿಯೆಯನ್ನು ನೆರವೇರಿಸುವುದು ಹಿಂದೂ ಧರ್ಮದಲ್ಲಿ ಸಮಾನ್ಯವಾಗಿರುವ ಸಂಪ್ರದಾಯ. ತಂದೆ ತಾಯಿಯ ಶವಕ್ಕೆ ಹೆಗಲು ನೀಡಿ ನಂತರ … Continued

ಮೊದಲನೇ ದಿನವೇ 15-18 ವರ್ಷ ವಯಸ್ಸಿನ 40 ಲಕ್ಷಕ್ಕೂ ಹೆಚ್ಚು ಮಕ್ಕಳು ಕೋವಿಡ್-19 ಲಸಿಕೆ

ನವದೆಹಲಿ: 15-18 ವರ್ಷದೊಳಗಿನ 40 ಲಕ್ಷಕ್ಕೂ ಹೆಚ್ಚು ಮಕ್ಕಳು ತಮ್ಮ ಮೊದಲ ಡೋಸ್ ಕೋವಿಡ್‌-19 ಲಸಿಕೆಯನ್ನು ವರ್ಗಕ್ಕೆ ಲಸಿಕೆ ಅಭಿಯಾನದ ಮೊದಲ ದಿನದಂದು ರಾತ್ರಿ 8 ಗಂಟೆ ವರೆಗೆ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಕೋವಿಡ್-19 ವಿರುದ್ಧ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆಯನ್ನು ಸೋಮವಾರದಿಂದ ದೇಶಾದ್ಯಂತ … Continued

ಕರ್ನಾಟಕದಲ್ಲಿ ಹೆಚ್ಚಳ: ಇಂದು ಸಂಜೆ ತಜ್ಞರ ಜೊತೆ ಸಿಎಂ ಸಭೆ, ಚರ್ಚೆ; ಶೀಘ್ರವೇ ಕಠಿಣ ನಿರ್ಬಂಧ ಜಾರಿ?

ಬೆಂಗಳೂರು: ಕರ್ನಾಟಕದಲ್ಲಿ ಏರಿಕೆಯಾಗುತ್ತಿರುವ ಕೋವಿಡ್‌-19 ಮತ್ತು ಓಮಿಕ್ರಾನ್‌ ಸೋಂಕಿನ ಬಗ್ಗೆ ತೀವ್ರ ನಿಗಾ ಇಡಲಾಗಿದೆ. ಈ ನಿಟ್ಟಿನಲ್ಲಿ  ಮಂಗಳವಾರ ಸಂಜೆ ತಜ್ಞರೊಂದಿಗೆ ನಭೆ ನಡೆಸಿ ಕೋವಿಡ್ ಮತ್ತು ಒಮಿಕ್ರಾನ್ ತಡೆಯುವ ಕುರಿತು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು, ಸೋಮವಾರ ಅಕ್ಕಪಕ್ಕ ರಾಜ್ಯಗಳಲ್ಲಿ ಹಾಗೂ ಕರ್ನಾಟಕಲ್ಲಿ ಕಳೆದೊಂದು ವಾರದಲ್ಲಿ ಕೋವಿಡ್-19(Covid-19) ಹಾಗೂ … Continued

ಕೊರೊನಾ ಹೆಚ್ಚಳ: ಬೆಂಗಳೂರಿನಲ್ಲಿ 1,041 ಸೇರಿ ರಾಜ್ಯದಲ್ಲಿ 1,290 ಹೊಸದಾಗಿ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,290 ಹೊಸ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,10, 847ಕ್ಕೆ ಏರಿಕೆಯಾಗಿದೆ. 232 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 29,61,122ಕ್ಕೆ ಏರಿದೆ. ರಾಜ್ಯದಲ್ಲಿ ಸದ್ಯ 11,345 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಸೋಂಕಿನಿಂದ … Continued

2 ಸಾವಿರಕ್ಕೂ ಅಧಿಕ ಪ್ರಯಾಣಿಕರಿದ್ದ ಮುಂಬೈ-ಗೋವಾ ಐಷಾರಾಮಿ ಹಡಗಿನಲ್ಲಿ 66 ಮಂದಿಗೆ ಕೊರೋನಾ ಸೋಂಕು; ಪೂರ್ಣ ಹಡಗು ಐಸೋಲೇಟ್​ !

ಮುಂಬೈ: 2000ಕ್ಕೂ ಅಧಿಕ ಪ್ರಯಾಣಿಕರು ಇದ್ದ ಮುಂಬೈ-ಗೋವಾ ಐಷಾರಾಮಿ ಕ್ರೂಸ್​ ಹಡಗಿನಲ್ಲಿ ಒಬ್ಬ ಪ್ರಯಾಣಿಕರಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಉಳಿದ ಪ್ರಯಾಣಿಕರನ್ನು ಅಲ್ಲಿಯೇ ಐಸೋಲೇಟ್ ಮಾಡಿ, ಎಲ್ಲರಿಗೂ ಆರ್​ಟಿ-ಪಿಸಿಆರ್​ ಟೆಸ್ಟ್ ಮಾಡಲಾಗುತ್ತಿದೆ. ಅದರ ವರದಿಯೂ ಬರುತ್ತಿದ್ದು, ಸದ್ಯ ಈ ಕಾರ್ಡೆಲಿಯಾ ಕ್ರೂಸಸ್​ ಐಷಾರಾಮಿ ಹಡಗಿನಲ್ಲಿ 66 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಒಬ್ಬರಲ್ಲಿ ಕೊವಿಡ್ … Continued