ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,290 ಹೊಸ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,10, 847ಕ್ಕೆ ಏರಿಕೆಯಾಗಿದೆ.
232 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 29,61,122ಕ್ಕೆ ಏರಿದೆ. ರಾಜ್ಯದಲ್ಲಿ ಸದ್ಯ 11,345 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಸೋಂಕಿನಿಂದ ಇಂದು ಐವರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಮೃತರ ಸಂಖ್ಯೆ 38,351ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿನ ಪ್ರಮಾಣ ಶೇ. 1.60 ರಷ್ಟಿದ್ದು, ಮರಣ ಪ್ರಮಾಣ ಶೇ. 0.38 ರಷ್ಟಿದೆ.
ಬೆಂಗಳೂರಿನಲ್ಲಿ 1,041 ಹೊಸ ಪ್ರಕರಣ ಪತ್ತೆಯಾಗಿದ್ದು, 134 ಸೋಂಕಿತರು ಗುಣಮುಖರಾಗಿದ್ದಾರೆ. ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಬಾಗಲಕೋಟೆ, ಚಾಮರಾಜನಗರ, ಹಾವೇರಿ, ರಾಮನಗರದಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ