ಎನ್‌ಐಎ ದಾಳಿ: ಐಸಿಸ್ ನಂಟು ಆರೋಪದಲ್ಲಿ ಮಾಜಿ ಶಾಸಕ ಇದಿನಬ್ಬ ಮೊಮ್ಮಗನ ಪತ್ನಿ ಬಂಧನ

ಮಂಗಳೂರು: ಉಳ್ಳಾಲದ ಮಾಜಿ ಶಾಸಕ ದಿವಂಗತ ಬಿ. ಎಂ. ಇದಿನಬ್ಬ ಅವರ ಪುತ್ರ, ಬಿ. ಎಂ. ಬಾಷಾ ಮನೆಗೆ ಎನ್ಐಎ ಅಧಿಕಾರಿಗಳು ಸೋಮವಾರ ಮತ್ತೆ ದಾಳಿ ನಡೆಸಿದ್ದು, ಎಸ್ಪಿ ನೇತೃತ್ವದ ಅಧಿಕಾರಿಗಳ ತಂಡ ಮನೆಯಲ್ಲಿದ್ದ ಬಾಷಾ ಅವರ ಸೊಸೆ ದೀಪ್ತಿ ಅಲಿಯಾಸ್ ಮರಿಯಂ ಅವಳನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಉಳ್ಳಾಲದ ಮಾಸ್ತಿಕಟ್ಟೆಯಲ್ಲಿರುವ ಬಿ. ಎಂ. ಬಾಷಾ ಅವರ ಮನೆಗೆ ಕಳೆದ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಎರಡು ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕ, ಬಾಷಾ ಅವರ ಕಿರಿಯ ಪುತ್ರ ಅಮರ್ ಅಬ್ದುಲ್ ರೆಹಮಾನ್ ಎಂಬಾತನನ್ನು ಬಂಧಿಸಿ ಕರೆದೊಯ್ದಿದ್ದರು.

ಬಾಷಾ ಅವರ ಇನ್ನೊಬ್ಬ ಪುತ್ರ ಅನಾಸ್‌ ಅವರ ಪತ್ನಿ ಮರಿಯಂ ಅವಳನ್ನು ಎರಡು ದಿನಗಳ ಕಾಲ ವಿಚಾರಣೆ ನಡೆಸಿ, ಕೊನೆಗೆ ಬಂಧನ ಮಾಡದೆ ಬಿಟ್ಟಿದ್ದರು.ಮರಿಯಂಗೆ ಸಣ್ಣ ಮಗು ಇದೆ ಎಂಬ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆ ನಡೆಸದೆ ಬಿಟ್ಟು ಕಳುಹಿಸಿದ್ದರು ಎನ್ನಲಾಗಿತ್ತು. ಆದರೆ ನಿರಂತರ ನಿಗಾದಿಂದ ಆಕೆಯ ಸಂಪರ್ಕದ ಜಾಡು ಹಿಡಿದಿದ್ದ ಎನ್ ಐಎ ಅ ಸೋಮವಾರ ಮತ್ತೆ ಅದೇ ಮನೆಗೆ ಎನ್ಐಎ ತಂಡ ದಾಳಿ ನಡೆಸಿದೆ. ಮರಿಯಂಳನ್ನು ವಿಚಾರಿಸಿ ವಶಕ್ಕೆ ಪಡೆದು ಟೆಂಪೋ ಟ್ರಾವೆಲರ್ ಮೂಲಕ ಕರೆದೊಯ್ದಿದ್ದಾರೆ. ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಕೋರ್ಟಿಗೆ ಹಾಜರು ಪಡಿಸುವ ಸಾಧ್ಯತೆ ಇದೆ.
ಕೊಡಗು ಮೂಲದ ದೀಪ್ತಿ ಹತ್ತು ವರ್ಷಗಳ ಹಿಂದೆ ದೇರಳ ಕಟ್ಟೆಯಲ್ಲಿ ಬಿಡಿಎಸ್ ಕಲಿಯುತ್ತಿದ್ದಾಗ ಬಿ. ಎಂ. ಬಾಷಾ ಅವರ ಪುತ್ರ ಅನಾಸ್ ನನ್ನು ಪ್ರೀತಿಸಿ ಮದುವೆಯಾಗಿದ್ದಳು. ತದ ನಂತರ ಮತಾಂತರಗೊಂಡು ಹೆಸರನ್ನು ಮರಿಯಂ ಎಂದು ಬದಲಿಸಿಕೊಂಡಿದ್ದಳು.
ನಂತರದ ದಿನಗಳಲ್ಲಿ ಉಗ್ರವಾದಿ ಸಂಘಟನೆ ಐಸಿಸ್ ಸಂಪರ್ಕ ಪಡೆದಿದ್ದು, ಮಂಗಳೂರಿನಲ್ಲಿದ್ದೇ ಜಮ್ಮು ಕಾಶ್ಮೀರದ ಲಿಂಕ್ ಹೊಂದಿದ್ದಳು ಎನ್ನಲಾಗಿತ್ತು. ಐಸಿಸ್ ನೆಟ್ವರ್ಕ್‌ ಗೆ ಯುವಕರನ್ನು ಸೇರಿಸುವ ಜಾಲದಲ್ಲಿ ಈಕೆಯೂ ಇದ್ದಾಳೆ ಎನ್ನುವ ಶಂಕೆಯಲ್ಲಿ ಎನ್ ಐಎ ಅಧಿಕಾರಿಗಳು ತನಿಖೆ ನಡೆಸಿದ್ದರು.

ಪ್ರಮುಖ ಸುದ್ದಿ :-   ನ್ಯಾಯಾಲಯದ ನಿರ್ದೇಶನ ಪಾಲಿಸಲು ನಿರ್ಲಕ್ಷ್ಯ: ರಾಜ್ಯ ಸರ್ಕಾರದ 41 ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement