ಬೆಂಗಳೂರು: ಕರ್ನಾಟಕದ ಒಂಬತ್ತು ಜಿಲ್ಲೆಗಳಲ್ಲಿ ಸಿಂಗಲ್ ಡೋಸ್ ಲಸಿಕೆ ನೀಡಿಕೆ ಪೂರ್ಣವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಈ ಪರಿಶ್ರಮಕ್ಕಾಗಿ ಎಲ್ಲಾ ಆರೋಗ್ಯ ಕಾರ್ಯಕರ್ತರು ಮತ್ತು ಜಿಲ್ಲಾಡಳಿತಕ್ಕೆ ಅಭಿನಂದನೆಗಳು. ಕರ್ನಾಟಕದಲ್ಲಿ ಒಟ್ಟಾರೆ 97.5% ರಷ್ಟು ಮೊದಲ ಡೋಸ್ ಲಸಿಕೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ರಾಜ್ಯದ ಬೆಂಗಳೂರು ನಗರ, ಬಾಗಲಕೋಟೆ, ಗದಗ, ವಿಜಯಪುರ, ಬೀದರ್, ಧಾರವಾಡ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಕೊಡಗು ಜಿಲ್ಲೆಗಳಲ್ಲಿ ಶೇ.100 ಮೊದಲ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ದಾವಣಗೆರೆ, ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಲ್ಲಿ ಶೇ.99 ರಷ್ಟು ಮೊದಲ ಡೋಸ್ ಲಸಿಕೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ