ಕೋವಿಡ್ ನಿರ್ಬಂಧ: ಕೇಂದ್ರದ ಶೆ.50ರಷ್ಟು ಸಿಬ್ಬಂದಿಗೆ ವರ್ಕ್ ಫ್ರಂ ಹೋಂ

ನವದೆಹಲಿ: ದೇಶಾದ್ಯಂತ ದೈನಂದಿನ ಕೋವಿಡ್ -19 ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ, ಅಧೀನ ಕಾರ್ಯದರ್ಶಿ ಮಟ್ಟಕ್ಕಿಂತ ಕೆಳಗಿನ ಸರ್ಕಾರಿ ನೌಕರರ ದೈಹಿಕ ಹಾಜರಾತಿಯನ್ನು ಶೇಕಡಾ 50 ಕ್ಕೆ ಸೀಮಿತಗೊಳಿಸಲಾಗುವುದು ಎಂದು ಕೇಂದ್ರ ಸರ್ಕಾರ ಸೋಮವಾರ ಪ್ರಕಟಿಸಿದೆ. ಮುಂದಿನ ಸೂಚನೆ ಬರುವವರೆಗೆ ಮನೆಯಿಂದಲೇ ಕೆಲಸ ಮಾಡಲು ಸೂಚಿಸಲಾಗಿದೆ.
ದಿವ್ಯಾಂಗರು, ಗರ್ಭಿಣಿಯರು ಕಚೇರಿಗೆ ಹಾಜರಾಗುವುದರಿಂದ ವಿನಾಯ್ತಿ ನೀಡಲಾಗಿದೆ.
ಕಂಟೈನ್ಮೆಂಟ್ ವಲಯದ ಸಿಬ್ಬಂದಿ ಆ ವಲಯಗಳನ್ನು ಕೋವಿಡ್ ಕಂಟೈನ್ಮೆಂಟ್ ಮುಕ್ತವಾಗಿಸುವ ವರೆಗೆ ಕಚೇರಿಗೆ ಬರುವಂತಿಲ್ಲ. ಕಚೇರಿಯಲ್ಲಿ ಒಟ್ಟಾರೆ ಸಂಖ್ಯೆಯ ಶೆ. 50 ರಷ್ಟು ಮಂದಿಗೆ ಮಾತ್ರವೇ ಕಚೇರಿಯಲ್ಲಿರಬೇಕು. ಈ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ.
ಅಲ್ಲದೆ, ಕೇಂದ್ರ ತನ್ನ ಎಲ್ಲಾ ಉದ್ಯೋಗಿಗಳು ಬಯೋಮೆಟ್ರಿಕ್ ಹಾಜರಾತಿ ಹಾಕುವುದನ್ನು ಜನವರಿ 31ರ ವರೆಗೆ ಸ್ಥಗಿತಗೊಳಿಸಿದೆ. ಮುಂದಿನ ಆದೇಶದವರೆಗೆ ಉದ್ಯೋಗಿಗಳು ಹಾಜರಾತಿ ರೆಜಿಸ್ಟರ್‌ನಲ್ಲಿ ದಾಖಲಿಸಬೇಕು. ಎಲ್ಲ ಸರ್ಕಾರಿ ಇಲಾಖೆಗಳಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ.
ಸರ್ಕಾರಿ ನೌಕರರ ಸುರಕ್ಷತೆ ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಭೀಕರ ದುರಂತ : ಭಾರತೀಯ ವಾಯುಪಡೆಯ AN-32 ವಿಮಾನ ಪತನ ; ಐವರು ಸಿಬ್ಬಂದಿ ಸಾವು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement