ಬೆಂಗಳೂರಲ್ಲಿ ಒಂದೇ ದಿನ ಹೊಸದಾಗಿ 3,047 ಸೋಂಕು ದಾಖಲು..!

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕಿನ ಮೂರನೇ ಅಲೆಯ ಆರ್ಭಟ ಶುರುವಾಗಿದ್ದು, ಪ್ರಕರಣಗಳ ಸಂಖ್ಯೆಯು ದಿನದಿಂದ ದಿನಕ್ಕೆ ದ್ವಿಗುಣಗೊಳ್ಳುತ್ತಿದೆ. ಕ್ಲಸ್ಟರ್‌ಗಳ ಸಂಖ್ಯೆಯೂ ಜಾಸ್ತಿಯಾಗುತ್ತಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಮಂಗಳವಾರ ಒಂದೇ ದಿನ 3,047 ಜನರಿಗೆ ಸೋಂಕು ದೃಢಪಟ್ಟಿದೆ. ಸೋಮವಾರಕ್ಕೆ ಹೋಲಿಸಿದರೆ, ಸೋಂಕಿತ ಪ್ರಕರಣಗಳು ಮೂರು ಪಟ್ಟು ಜಾಸ್ತಿ ಆಗಿರುವುದು ಆತಂಕ ಮೂಡಿಸಿದೆ. ಈ ಸಂಖ್ಯೆ ದಿನ ಕಳೆದಂತೆ ನಾಲ್ಕೈದು ಪಟ್ಟು ಏರಿಕೆಯಾಗುವ ಸಾಧ್ಯತೆಗಳಿವೆ. ಹೀಗಾಗಿ, ಪಾಲಿಕೆಯು ಸೋಂಕು ನಿಯಂತ್ರಣಕ್ಕೆ ಮೂರು ಮತ್ತು ಅದಕ್ಕಿಂತ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾದ ಕಟ್ಟಡಗಳನ್ನು ಸೀಲ್‌ಡೌನ್‌ ಮಾಡುತ್ತಿದೆ.
ಅಲ್ಲದೆ, ಒಂದೇ ಕಟ್ಟಡ ಅಥವಾ ಅಪಾರ್ಟ್‌ಮೆಂಟ್‌ಗಳಲ್ಲಿ ಮೂರು ಅಥವಾ ಅದಕ್ಕಿಂತ ಹೆಚ್ಚು ಸೋಂಕು ಪ್ರಕರಣಗಳು ಕಂಡು ಬಂದರೆ, ಅಂಥ ಕಟ್ಟಡಗಳನ್ನು ಕ್ಲಸ್ಟರ್‌ಗಳೆಂದು ಗುರುತಿಸಲಾಗುತ್ತಿದೆ. ಅಕ್ಕ ಪಕ್ಕದ ಮನೆಗಳು, ಕೆಳ ಅಂತಸ್ತು ಇಲ್ಲವೇ ಮಹಡಿಗಳನ್ನು ಮೈಕ್ರೋ ಕಂಟೈನ್ಮೆಂಟ್‌ ವಲಯಗಳೆಂದು ಘೋಷಿಸಿ ಸೋಂಕು ನಿಯಂತ್ರಣಕ್ಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಬೆಂಗಳೂರಿನಲ್ಲಿ 151 ಮೈಕ್ರೋ ಕಂಟೈನ್ಮೆಂಟ್‌ ವಲಯಗಳನ್ನು ಗುರುತಿಸಲಾಗಿದೆ ಹಾಗೂ 95 ಅಪಾರ್ಟ್‌ಮೆಂಟ್‌ಗಳನ್ನು ಕಂಟೈನ್ಮೆಂಟ್‌ ವಲಯಗಳೆಂದು ಗುರುತಿಸಲಾಗಿದೆ. 2 ಹಾಸ್ಟೆಲ್‌ಗಳಲ್ಲಿ ಅಧಿಕ ಸೋಂಕಿತ ಪ್ರಕರಣಗಳು ಕಂಡುಬಂದಿವೆ.
ಬೆಂಗಳೂರು ನಗರದಲ್ಲಿ ಪಾಸಿಟಿವಿಟಿ ದರವು ಶೇ 3ಕ್ಕೆ ಏರಿದೆ. ಈ ಮೊದಲು ಶೇ 1.83ರಷ್ಟಿತ್ತು. ಮರಣ ದರವು ಶೇ 0.36ರಷ್ಟು ಇದೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement