ರಾಜ್ಯದ 68 ವಸತಿ ಶಾಲೆಗಳಿಗೆ ಡಾ. ಬಿ.ಆರ್ ಅಂಬೇಡ್ಕರ್ ಹೆಸರು

ಬೆಂಗಳೂರು: ಇತ್ತೀಚಿನ ರಾಜ್ಯ ಸರ್ಕಾರದ ಆದೇಶದ ನಂತರ, ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಲವಾರು ಶಾಲೆಗಳಿಗೆ ಭಾರತ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರಿಡಲು ನಿರ್ಧರಿಸಲಾಗಿದೆ.
ಅಕ್ಟೋಬರ್ 25ರಂದು ಸಮಾಜ ಕಲ್ಯಾಣ ಆಯುಕ್ತ ಡಾ.ರವಿಕುಮಾರ್ ಸುರಪುರ ಅವರು ಕರ್ನಾಟಕ ಸರ್ಕಾರಕ್ಕೆ ಬರೆದ ಪತ್ರದ ಪರಿಣಾಮ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 1ರಿಂದ 5ನೇ ತರಗತಿಯ ಸುಮಾರು 68 ವಸತಿ ಶಾಲೆಗಳಿಗೆ ಡಾ. ಬಿಆರ್ ಅಂಬೇಡ್ಕರ್ ಹೆಸರಿಡಲು ನಿರ್ಧರಿಸಲಾಗಿದೆ.
ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳಿಗೆ ‘ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ’ ಎಂದು ನಾಮಕರಣ ಮಾಡಲು ಅವಕಾಶ ನೀಡುವಂತೆ ರವಿಕುಮಾರ್ ಸುರಪುರ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದರು.
ರವಿಕುಮಾರ್ ಪತ್ರವನ್ನು ಪರಿಶೀಲಿಸಿದ ನಂತರ ರಾಜ್ಯ ಸರ್ಕಾರ ಅಧಿಕೃತವಾಗಿ ಇತ್ತೀಚೆಗೆ ಆದೇಶ ಹೊರಡಿಸಿದ್ದು, ಜನವರಿ 1 ರಿಂದ ಶಾಲೆಗಳಿಗೆ ಅಂಬೇಡ್ಕರ್ ಅವರ ಹೆಸರನ್ನು ಮರುನಾಮಕರಣ ಮಾಡಲಾಗುವುದು ಎಂದಿದ್ದಾರೆ. ಪತ್ರದ ಪ್ರಕಾರ, ಈ 68 ಶಾಲೆಗಳಲ್ಲಿ ಒಟ್ಟು 8,500 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಪ್ರತಿ ತರಗತಿಗೆ 25 ವಿದ್ಯಾರ್ಥಿಗಳಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮೇ 10ರ ವರೆಗೆ ಮಳೆ ಮುನ್ಸೂಚನೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement