ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದವನ ಬೂಟುಗಾಲಿನಿಂದ ತುಳಿದ ಕೇರಳ ಪೊಲೀಸ್ ಅಮಾನತು..ದೃಶ್ಯ ವಿಡಿಯೊದಲ್ಲಿ ಸೆರೆ

ತಿರುವನಂತಪುರಂ: ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಎಂದು ಆರೋಪಿಸಲಾದ ಪ್ರಯಾಣಿಕರೊಬ್ಬರನ್ನು ಪೊಲೀಸ್ ಬೂಟುಗಾಲಿನಿಂದ ಒದೆಯುತ್ತಿರುವುದನ್ನು ತೋರಿಸುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಕೇರಳದಲ್ಲಿ ಈ ಘಟನೆ ನಡೆದಿದ್ದು ಸುಮಾರು 20 ಸೆಕೆಂಡುಗಳ ವಿಡಿಯೊದಲ್ಲಿ, ಪೊಲೀಸ್ ನೆಲದ ಮೇಲೆ ಕುಳಿತಿದ್ದ ಪ್ರಯಾಣಿಕನನ್ನು ಬೂಟುಗಾಲಿನಿಂದ ಒದೆಯುತ್ತಿರುವುದನ್ನು ನೋಡಬಹುದು. ಕಾಣಿಸುತ್ತದೆ. ಈ ಅಮಾನವೀಯ ವರ್ತನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ನಂತರ ತಪ್ಪಿತಸ್ಥ ಪೊಲೀಸನನ್ನು ಅಮಾನತು ಮಾಡಲಾಗಿದೆ. ನೆಲದಲ್ಲಿ ಕುಳಿತ ಪ್ರಯಾಣಿನ ಮೇಲೆ ಪೊಲೀಸ್ ದರ್ಪ ತೋರಿಸುವಾಗ ಇನ್ನೊಬ್ಬ ಪೊಲೀಸ್ ಮತ್ತು ರೈಲ್ವೆ ಅಧಿಕಾರಿ ಅಲ್ಲೇ ನಿಂತಿರುವುದು ವಿಡಿಯೊದಲ್ಲಿ ಕಾಣಿಸುತ್ತದೆ. ಭಾನುವಾರ ಮವೇಲಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಈ ಘಟನೆ ನಡೆದಿದೆ. ಟಿಕೆಟ್ ಪರಿಶೀಲಿಸಲು ಪೊಲೀಸರು ಕಣ್ಣೂರಿನಿಂದ ರೈಲು ಹತ್ತಿದ್ದಾರೆ ಎಂದು ವರದಿಯಾಗಿದೆ. ವ್ಯಕ್ತಿ ಮದ್ಯಪಾನ ಮಾಡಿದ್ದ ಎಂದು ಪೊಲೀಸರು ಭಾವಿಸಿದ್ದರು ಎಂದು ವರದಿಯಾಗಿದೆ.

 

ಪ್ರಮುಖ ಸುದ್ದಿ :-   'ಅಕ್ರಮ' ಐಪಿಎಲ್ ಸ್ಟ್ರೀಮಿಂಗ್ ಪ್ರಕರಣ : ಮಹಾರಾಷ್ಟ್ರ ಸೈಬರ್ ಪೊಲೀಸರಿಂದ ನಟಿ ತಮನ್ನಾ ಭಾಟಿಯಾಗೆ ಸಮನ್ಸ್

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement