ಸುಪ್ರೀಂಕೋರ್ಟ್‍ನಲ್ಲಿ ಮೇಕೆದಾಟು ಅರ್ಜಿ ವಿಚಾರಣೆ ಜನವರಿ 25ಕ್ಕೆ

ನವದೆಹಲಿ: ಮೇಕೆದಾಟು ಅಣೆಕಟ್ಟು ನಿರ್ಮಾಣ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ಜನವರಿ 25ಕ್ಕೆ ಈ ಬಗ್ಗೆ ವಿಸ್ತೃತ ವಿಚಾರಣೆ ನಡೆಸುವುದಾಗಿ ನ್ಯಾ.ಎ.ಎಂ ಖಾನ್ವಿಲ್ಕರ್ ನೇತೃತ್ವದ ದ್ವಿ ಸದಸ್ಯ ಪೀಠ ಹೇಳಿದೆ.
ಮೇಕೆದಾಟು ಆಣೆಕಟ್ಟು ನಿರ್ಮಾಣ ವಿಚಾರವಾಗಿ ದೆಹಲಿಯ ರಾಷ್ಟ್ರೀಯ ಹಸಿರು ನ್ಯಾಯಧೀಕರಣ ನೀಡಿದ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಅರ್ಜಿ ಸಲ್ಲಿಸಿದ್ದು, ಇಂದು ವಿಚಾರಣೆ ನಡೆಸಿದ ಕೋರ್ಟ್ ಮೂಲ ಅರ್ಜಿಯೊಂದಿಗೆ ಇದನ್ನೂ ವಿಚಾರಣೆ ನಡೆಸುವುದಾಗಿ ಹೇಳಿದೆ.
ಮೇಕೆದಾಟು ಅಣೆಕಟ್ಟು ನಿರ್ಮಾಣ ಪ್ರದೇಶದಲ್ಲಿ ಈಗಾಗಲೇ ಕಾಮಗಾರಿ ಆರಂಭವಾಗಿದೆ. ಇದು ಪರಿಸರದ ಮೇಲೆ ಪರಿಣಾಮ ಬೀರಲಿದೆ ಎಂದು ತಮಿಳುನಾಡು ಮಾಧ್ಯಮಗಳು ವರದಿ ಮಾಡಿದ್ದವು. ವರದಿ ಆಧರಿಸಿ ಚೆನ್ನೈನಲ್ಲಿರುವ ದಕ್ಷಿಣ ಹಸಿರು ನ್ಯಾಯಧೀಕರಣ ಸ್ವಯಂ ದೂರು ದಾಖಲಿಸಿಕೊಂಡಿತ್ತು.
ತಮಿಳುನಾಡು ಸರ್ಕಾರ ಸಲ್ಲಿಸಿದ ಮಾಹಿತಿಯೊಂದಿಗೆ ವಿಚಾರಣೆ ನಡೆಸಿದ ಕೋರ್ಟ್ ಸ್ಥಳ ಪರಿಶೀಲನೆಗಾಗಿ ಸಮಿತಿ ರಚನೆ ಮಾಡಿತ್ತು. ಆದರೆ ತನ್ನ ಅಭಿಪ್ರಾಯ ಕೇಳದೆ ರಚಿಸಿದ್ದ ಸಮಿತಿಗೆ ಕರ್ನಾಟಕ ಸರ್ಕಾರ ವಿರೋಧ ವ್ಯಕ್ತಪಡಿಸಿ ದೆಹಲಿಯ ಹಸಿರು ನ್ಯಾಯಧೀಕರಣಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು.
ರಾಷ್ಟ್ರೀಯ ಹಸಿರು ಪೀಠ ಚೆನ್ನೈಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ತಮಿಳುನಾಡು ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಇನ್ನು ಯೋಜನೆಯನ್ನು ವಿರೋಧಿಸಿ ತಮಿಳುನಾಡು ಈಗಾಗಲೇ ಒಂದು ಪ್ರತ್ಯೇಕ ಅರ್ಜಿ ಸಲ್ಲಿಸಿರುವ ಹಿನ್ನೆಲೆ ಎರಡು ಅರ್ಜಿಗಳನ್ನು ಒಟ್ಟಾಗಿ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement