ಚಿಕ್ಕಬಳ್ಳಾಪುರದಲ್ಲಿ ರಾತ್ರಿ ಮತ್ತೆ ಕಂಪಿಸಿದ ಭೂಮಿ: ಕೊರೆಯುವ ಚಳಿಯಲ್ಲೇ ಮನೆಯಿಂದ ಹೊರಗೆ ಕಾಲ ಕಳೆದ ಜನ..

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ತಾಲೂಕಿನ ಹಲವು ಗ್ರಾಮಗಳಲ್ಲಿ ಇಂದು, ಬುಧವಾರ ಮುಂಜಾನೆ 3 ಗಂಟೆಗೆ ಭೂಮಿ ಕಂಪಿಸಿದ್ದು ಜನರು ಮತ್ತೊಮ್ಮೆ ಬೆಚ್ಚಿಬಿದ್ದಿದ್ದಾರೆ.
ರಿಕ್ಟರ್ ಮಾಪಕದಲ್ಲಿ​ 2.6 ತೀವ್ರತೆಯ ಭೂಕಂಪ ದಾಖಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ, ಬೋಗಪರ್ತಿ ಶೆಟ್ಟಿಗೇರೆ, ಅಡ್ಡಗಲ್, ಬೀರಗಾನಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದೆ. ಗ್ರಾಮಸ್ಥರಿಗೆ ಭೂಮಿ ಕಂಪಿಸಿದ ಅನುಭವ ಉಂಟಾದ ಹಿನ್ನೆಲೆ ಭಯಗೊಂಡು ಮನೆಯಿಂದ ಹೊರ ಬಂದು ಚಳಿಯಲ್ಲೇ ಕಾಲ ಕಳೆದಿದ್ದಾರೆ. ಸುಮಾರು 3 ಸೆಂಕೆಡ್​ಗಳ ಕಾಲ 2.6 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಳೆದ ತಿಂಗಳು ಸಹ ಈ ಗ್ರಾಮಗಳಲ್ಲಿ ಭೂಕಂಪನ ಉಂಟಾಗಿತ್ತು. ಸಾಕಷ್ಟು ಮನೆಗಳು ಬಿರುಕು ಬಿಟ್ಟಿದ್ದು, ಗ್ರಾಮಸ್ಥರು ಭಯಭೀತರಾಗಿದ್ದರು. ಜಿಲ್ಲೆಯಲ್ಲಿ ಕಳೆದ 30 ದಿನಗಳಲ್ಲಿ 3 ಬಾರಿ ಭೂಕಂಪನ ಸಂಭವಿಸಿದೆ.

0 / 5. 0

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement