ಮೆಟ್ರೊದಲ್ಲಿ ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರ ಸಂಚಾರ, ಸ್ಟ್ಯಾಂಡಿಂಗ್ ಇಲ್ಲ: ಸರ್ಕಾರದ ಸೂಚನೆ

ಬೆಂಗಳೂರು: ಕೊರೊನಾ 3ನೇ ಅಲೆ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ಮಂಗಳವಾರ ಹಲವು ಕಠಿಣ ಕ್ರಮಗಳನ್ನು ಪ್ರಕಟಿಸಿದೆ.
ಜನರ ಸಂಚಾರಕ್ಕೆ ಕಡಿವಾಣ ಹಾಕಲು ನಿರ್ಧರಿಸಿರುವ ಸರ್ಕಾರವು ಬೆಂಗಳೂರಿನ ಮೆಟ್ರೊ ರೈಲುಗಳಲ್ಲಿ ಹಾಗೂ ಬಸ್ಸುಗಳಲ್ಲಿ ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರ ಸಂಚಾರಕ್ಕೆ ಅನುಮತಿ ನೀಡಿದೆ. ನಿಂತು ಪ್ರಯಾಣಿಸಲು ಅನುಮತಿ ಇರುವುದಿಲ್ಲ. ಈ ಕುರಿತು ಮೆಟ್ರೊ ನಿಗಮದಿಂದ ಅಧಿಕೃತ ಮಾಹಿತಿ ಪ್ರಕಟವಾಗಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಮಾಧ್ಯಮದವರಿಗೆ ತಿಳಿಸಿದ್ದಾರೆ.
ಕೊರೊನಾ ನಿಯಂತ್ರಣ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಂಗಳವಾರ ಸಂಜೆ ನಡೆದ ಸುದೀರ್ಘ ಸಭೆಯ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎಂಟಿಸಿ, ಕೆಎಸ್​ಆರ್​ಟಿಸಿ ಮತ್ತು ರೈಲು ಪ್ರಯಾಣದ ಬಗ್ಗೆ ಆಯಾ ನಿಗಮಗಳ ಮುಖ್ಯಸ್ಥರು ವಿವರಗಳನ್ನು ಪ್ರಕಟಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಸ್ತುತ ಚಾಲ್ತಿಯಲ್ಲಿರುವ ನಿಯಮಾವಳಿಗಳ ಅನ್ವಯವೇ ರಾತ್ರಿ 10ರಿಂದ ಬೆಳಿಗ್ಗೆ 5 ಗಂಟೆಯ ವರೆಗೆ ರಾಜ್ಯವ್ಯಾಪಿ ಕರ್ಫ್ಯೂ ನಿಯಮಗಳು ಚಾಲ್ತಿಯಲ್ಲಿರುತ್ತವೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement