ಹುಬ್ಬಳ್ಳಿ: ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಕಾನೂನು ವಿವಿ ಕುಲಪತಿ ಮೇಲೆ ಮಸಿ-ಹಲವರು ವಶಕ್ಕೆ

ಹುಬ್ಬಳ್ಳಿ: ಕಾನೂನು ಪದವಿ ವಿದ್ಯಾರ್ಥಿಗಳ ಬೇಡಿಕೆಗೆ ಸರಕಾರ, ಕುಲಪತಿ ಸ್ಪಂದಿಸುತ್ತಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದ ಪ್ರತಿಭಟನಾ ನಿರತ ವಿದ್ಯಾರ್ಥಿಯೊಬ್ಬ ಕಾನೂನು ವಿವಿ ಕುಲಪತಿ ಮೇಲೆ ಮಸಿ ಎರಚಿದ ಘಟನೆ ಬುಧವಾರ ನಡೆದಿದೆ. ಸ್ಥಳದಲ್ಲಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ಮೇಲೂ ಮಸಿ ಬಿದ್ದಿದೆ.
ಘಟನೆ ತೀವ್ರ ರೂಪ ಪಡೆಯುತ್ತಿದ್ದಂತೆ ಕೆಲ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರತಿಭಟನಾ ನಿರತರನ್ನು ಚದುರಿಸಿದ್ದಾರೆ.

ಬುಧವಾರ ಮಧ್ಯಾಹ್ನ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಕುಲಪತಿ ಪ್ರೊ. ಈಶ್ವರ ಭಟ್ಟ ಆಗಮಿಸಿದ್ದರು. ವಿದ್ಯಾರ್ಥಿಗಳ ಬೇಡಿಕೆಗಳ ಕುರಿತು ಮಾತನಾಡಿದ ಕುಲಪತಿಗಳು, ವಿಶ್ವವಿದ್ಯಾಲಯದ ನಿಯಮಗಳನ್ನು ಬಿಟ್ಟು ಬೇರೆ ನಿರ್ಣಯ ಕೈಗೊಳ್ಳಲು ಬರುವುದಿಲ್ಲ. ಕೆಲ ಬೇಡಿಕೆ ಈಡೇರಿಸಲು ಸಮಯವೂ ಬೇಕಾಗುತ್ತದೆ. ಕಾನೂನು ಪದವಿ ವೃತ್ತಿಪರ ಕೋರ್ಸ್ ಆಗಿರುವುದರಿಂದ ಆನ್‌ಲೈನ್ ಪರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದುತಿಳಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಯೊಬ್ಬ ಆರಂಭದಿಂದಲೂ ನೀವು ಇದೇ ಉತ್ತರವನ್ನು ನೀಡುತ್ತಿದ್ದೀರಿ ಎಂದು ಕೋಪಗೊಂಡು ಮಸಿ ಎರಚಿದ್ದಾನೆ. ಈ ವೇಳೆ ಕುಲಪತಿಗಳ ಪಕ್ಕದಲ್ಲೇ ಇದ್ದ ಹಿರಿಯ ಪೊಲೀಸ್ ಅಧಿಕಾರಿಗಳಿಗೂ ಮಸಿ ಬಿದ್ದಿದೆ. ಇದರಿಂದ ಕೆಲಕಾಲ ಗೊಂದಲ ನಿರ್ಮಾಣವಾಗಿತ್ತು. ನಂತರ ವಿದ್ಯಾರ್ಥಿ ಮುಖಂಡರನ್ನು ಪೊಲೀಸ್‌ರು ವಶಕ್ಕೆ ಪಡೆದು ಉಳಿದ ವಿದ್ಯಾರ್ಥಿಗಳನ್ನು ಚದುರಿಸಿದರು.

ಪ್ರಮುಖ ಸುದ್ದಿ :-   ಇವರು ಭಾರತದ ಅತ್ಯಂತ ಶ್ರೀಮಂತ ಅಭ್ಯರ್ಥಿ : ತೆಲುಗು ದೇಶಂ ಪಕ್ಷದ ಇವರ ಆಸ್ತಿ 5,785 ಕೋಟಿ ರೂಪಾಯಿ...!

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement