ತೆಲುಗಿನ ಖ್ಯಾತ ನಟ ಮಹೇಶ್​ ಬಾಬುಗೆ ಕೊವಿಡ್ ಸೋಂಕು

ತೆಲುಗಿನ ಖ್ಯಾತ ನಟ ಮಹೇಶ್​ ಬಾಬು ಅವರಿಗೆ ಕೊವಿಡ್ ಸೋಂಕು ದೃಢಪಟ್ಟಿದೆ.
ಈ ಕುರಿತು ಅವರು ಟ್ವೀಟ್‌ ಮಾಡಿದ್ದು, ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಂಡ ಹೊರತಾಗಿಯೂ ಕೊವಿಡ್​ ಸೋಂಕು ತಗುಲಿದೆ ಎಂದು ತಿಳಿಸಿದ್ದಾರೆ.
ನನಗೆ ಕೊವಿಡ್​ 19 ಅಂಟಿದೆ. ನಾನು ಮನೆಯಲ್ಲಿ ಕ್ವಾರಂಟೈನ್​ ಆಗಿದ್ದೇನೆ. ವೈದ್ಯರ ಸೂಚನೆ ಹಾಗೂ ಮಾರ್ಗದರ್ಶನವನ್ನು ಅನುಸರಿಸುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

ನನ್ನ ಸಂಪರ್ಕಕ್ಕೆ ಬಂದವರೆಲ್ಲರನ್ನೂ ಕೊವಿಡ್​ ಪರೀಕ್ಷೆಗೆ ಒಳಪಡಲು ವಿನಂತಿಸಿಕೊಳ್ಳುತ್ತಿದ್ದೇನೆ. ಕೊವಿಡ್​ ಲಸಿಕೆಯನ್ನು ತೆಗೆದುಕೊಳ್ಳದ ಪ್ರತಿಯೊಬ್ಬರು ತಕ್ಷಣವೇ ಲಸಿಕೆ ತೆಗೆದುಕೊಳ್ಳುವಂತೆ ನಾನು ಮನವಿ ಮಾಡುತ್ತೇನೆ. ಕೊರೊನಾ ಲಸಿಕೆ ಅಪಾಯವನ್ನು ಕಡಿಮೆ ಮಾಡುತ್ತದೆ. ದಯವಿಟ್ಟು ಕೊವಿಡ್​ ನಿಯಮಗಳನ್ನು ಅನುಸರಿಸಿ ಮತ್ತು ಸುರಕ್ಷಿತವಾಗಿರಿ’ ಎಂದು ಮಹೇಶ್​ ಬಾಬು ಹೇಳಿದ್ದಾರೆ.

0 / 5. 0

ಪ್ರಮುಖ ಸುದ್ದಿ :-   ಕೋವಿಡ್ ಲಸಿಕೆಗಳಿಗೂ ಹೃದಯಾಘಾತದ ಸಾವುಗಳಿಗೂ ಯಾವುದೇ ಸಂಬಂಧವಿಲ್ಲ; ತಳ್ಳಿಹಾಕಿದ ಏಮ್ಸ್ ವೈದ್ಯರು

ನಿಮ್ಮ ಕಾಮೆಂಟ್ ಬರೆಯಿರಿ

advertisement