ಇಂದಿನಿಂದ ಬೆಂಗಳೂರಿನಲ್ಲಿ ಜನೆವರಿ19ರ ವರೆಗೆ ಬೆಂಗಳೂರಿನಲ್ಲಿ ಮಾತ್ರ ಶಾಲೆಗಳಿಗೆ ರಜೆ, ಉಳಿದ ಜಿಲ್ಲೆಗಳಲ್ಲಿ ಇಲ್ಲ

ಬೆಂಗಳೂರು: ಕೊರೊನಾ ಹಾಗೂ ಓಮಿಕ್ರಾನ್ ನಿಯಂತ್ರಣಕ್ಕಾಗಿ ಬೆಂಗಳೂರು ನಗರದಲ್ಲಿ 10, 11 ಮತ್ತು 12ನೇ ತರಗತಿ ಹೊತುಪಡಿಸಿ, 1ರಿಂದ 9ನೇ ತರಗತಿ ವರೆಗೆ ಎಲ್ಲಾ ಮಾದರಿಯ ಶಾಲೆಗಳನ್ನು ಬಂದ್ ಮಾಡಲಾಗಿದೆ. ಬೆಂಗಳೂರು ಹೊರತುಪಡಿಸಿ ಇತರೆ ಜಿಲ್ಲೆಗಳಲ್ಲಿ ಯಥಾಸ್ಥಿತಿಯಲ್ಲಿ ಶಾಲೆಗಳು ನಡೆಯಲಿವೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಈ ಕುರಿತು ಆದೇಶ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು, ರಾಜ್ಯದಲ್ಲಿ ಕೋವಿಡ್-19 ರೂಪಾಂತರಿ ವೈರಸ್ ಓಮಿಕ್ರಾನ್ ವೈರಾಣು ಸೋಂಕು ನಿಯಂತ್ರಿಸುವ ಕಾರಣದಿಂದಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಶಾಲೆಗಳಲ್ಲಿನ ಭೌತಿಕ ತರಗತಿಗಳನ್ನು ಸ್ಥಗಿತಕ್ಕೆ ಕ್ರಮವನ್ನು ಸರ್ಕಾರ ಕೈಗೊಂಡಿದೆ. ಈ ನಿಟ್ಟಿನಲ್ಲಿ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿನ ಬೆಂಗಳೂರು ಉತ್ತರ, ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿನ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ, ಎಲ್ ಕೆಜಿ, ಯುಕೆಜಿ ಹಾಗೂ 1 ರಿಂದ 9ನೇ ತರಗತಿವರೆಗೆ ಭೌತಿಕ ತರಗತಿಗಳನ್ನು ದಿನಾಂಕ 06-01-2022 ರಿಂದ ದಿನಾಂಕ 19-01-2022ರ ವರೆಗೆ ಅಥವಾ ಮುಂದಿನ ಆದೇಶದ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದೆ.

ಪ್ರಮುಖ ಸುದ್ದಿ :-   ಇಬ್ಬರೂ ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಜಗಳದ ಕುರಿತು ಸುಪ್ರೀಂ ಕೋರ್ಟ್‌

ಈ ಅವಧಿಯಲ್ಲಿ ಶಾಲೆಗಳು ಆನ್ ಲೈನ್, ಇತರೆ ಮಾರ್ಗಗಳ ಮೂಲಕ ಕಲಿಕಾ, ಬೋಧನಾ ಚಟುವಟಿಕೆಗಳನ್ನು ಮುಂದುವರೆಸಲಿದೆ. ಅಲ್ಲದೆ, ಕೊರೋನಾ ಮುಂಜಾಗ್ರತೆ ಕಟ್ಟುನಿಟ್ಟಿನ ಕ್ರಮದೊಂದಿಗೆ 10, 11 ಮತ್ತು 12ನೇ ವರ್ಗಗಳ ಭೌತಿಕ ತರಗತಿಗಳನ್ನು ಎಂದಿನಂತೆ ನಡೆಸಲು ತಿಳಿಸಲಾಗಿದೆ.
ಬೆಂಗಳೂರು ನಗರ ಜಿಲ್ಲೆ ಹೊರತುಪಡಿಸಿ, ಕರ್ನಾಟಕದ ಉಳಿದ ಎಲ್ಲ ಜಿಲ್ಲೆಗಳ ಶಾಲೆಗಳಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮದೊಂದಿಗೆ ಶಾಲಾ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಿಕೊಂಡು ಹೋಗಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement