ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಾಹಿತಿ…ಎಸ್​ಎಸ್​ಎಲ್​ಸಿ‌ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಸ್ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ (ಜ.6) ಪ್ರಕಟಿಸಿದೆ. ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ ಮಾರ್ಚ್​​ 28ರಿಂದ ಏಪ್ರಿಲ್​ 11ರ ವರೆಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಲಾಗಿದೆ.
ಜನವರಿ 14ರೊಳಗೆ ಪೋಷಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಈ ದಿನಾಂಕದೊಳಗೆ ಯಾವುದೇ ಆಕ್ಷೇಪಣೆ ಸಲ್ಲಿಕೆಯಾಗದಿದ್ದಲ್ಲಿ ವೇಳಾಪಟ್ಟಿಯೇ ಅಂತಿಮ ಎಂದು ತೀರ್ಮಾನಿಸಲಾಗುವುದು ಎಂದು ಮಂಡಳಿ ತಿಳಿಸಿದೆ.

*28-03-2022 ರಂದು ಪ್ರಥಮ ಭಾಷೆಗಳಾದಂತ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು,  ಇಂಗ್ಲಿಷ್‌ ( ಕೇಂದ್ರ ಪಠ್ಯಕ್ರಮ) ಸಂಸ್ಕೃತ
*30-03-2022ರಂದು ದ್ವಿತೀಯ ಭಾಷೆ – ಇಂಗ್ಲಿಷ್‌, ಕನ್ನಡ
*01-04-2022ರಂದು ಕೋರ್ ಸಬ್ಜೆಕ್ಟ್ – ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್ 2, ಇಂಜಿನಿಯರಿಂಗ್ ಗ್ರಾಫಿಕ್ಸ್ 2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥ ಶಾಸ್ತ್ರ
 * 04-04-2022ರಂದು ಕೋರ್ ಸಬ್ಜೆಕ್ಟ್ – ಗಣಿತ, ಸಮಾಜ ಶಾಸ್ತ್ರ
* 05-04-2022ರಂದು ಯಾವುದೇ ಪರೀಕ್ಷೆ ಇಲ್ಲ
* 06-04-2022ರಂದು ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ
* 08-04-2022ರಂದು – ತೃತೀಯ ಭಾಷೆ – ಹಿಂದಿ ( ಕೇಂದ್ರ ಪಠ್ಯಕ್ರಮ ), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
* 08-04-2022ರಂದು ಎನ್ ಎಸ್ ಕ್ಯೂ ಎಫ್ ಪರೀಕ್ಷಾ ವಿಷಯಗಳು – ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಡ್ ವೆಲ್ ನೆಸ್

* 11-04-2022ರಂದು ಕೋರ್ ಸಬ್ಜೆಕ್ಟ್ – ವಿಜ್ಞಾನ, ರಾಜ್ಯ ಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ

ಬೆಳಿಗ್ಗೆ 10:30ರಿಂದ ಮಧ್ಯಾಹ್ನ 1:45ರವರೆಗೆ ಪರೀಕ್ಷೆಗಳು ನಡೆಯಲಿವೆ. ಪ್ರತಿ ವಿಷಯಕ್ಕೂ ಪ್ರಶ್ನಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ. ವೇಳಾಪಟ್ಟಿಗೆ ಅಭ್ಯರ್ಥಿಗಳು / ಪೋಷಕರು ಆಕ್ಷೇಪಣೆ ಸಲ್ಲಿಸಲು ಜನವರಿ 6- 14 ರವರೆಗೆ ಅವಕಾಶ ಇದೆ. ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ವೆಬ್​ಸೈಟ್​ನಲ್ಲಿ ಸಲ್ಲಿಸಬಹುದು.

ಪ್ರಮುಖ ಸುದ್ದಿ :-   ಪೋಕ್ಸೋ ಪ್ರಕರಣ : ಮುರುಘಾ ಶರಣರ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

 

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement