2 ಡೋಸ್ ಲಸಿಕೆ ಪಡೆದವರು ಮಾತ್ರ ಖಾಸಗಿ ಕಚೇರಿ-ಸಂಸ್ಥೆ -ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿದ್ದಾರೆಯೇ ಪರಿಶೀಲಿಸಿ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಖಾಸಗಿ ಸಂಸ್ಥೆಗಳು, ಕಚೇರಿಗಳು, ಕಾರ್ಖಾನೆಗಳಲ್ಲಿ ಕೆಲಸ ಮಾಡುವ ನೌಕರರಿಗೆ 2 ಡೋಸ್ ಲಸಿಕೆ ಪಡೆದಿದ್ದರೆ  ಕೆಲಸಕ್ಕೆ ಅನುಮತಿ ನೀಡಬೇಕು ಎಂದು ಆದೇಶಿಸಿದೆ.
ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈ ಕ್ರಮದ ಅನುಸಾರ ಕಾರ್ಮಿಕ ಇಲಾಖೆಯ ಅಡಿಯಲ್ಲಿ ಬರುವ ಉದ್ದಿಮೆ, ಕಾರ್ಖಾನೆಗಳು, ಐಟಿ ಸಂಸ್ಥೆಗಳು ( Industries/factories, IT Industries ) ಸೇರಿದಂತೆ ಇತರೆಡೆ ಎರಡು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಕಚೇರಿ ಕೆಲಸಕ್ಕೆ ಹಾಜರಾಗಲು ಅನುಮತಿ ನೀಡಬೇಕು ಎಂದು ತಿಳಿಸಲಾಗಿದೆ.
ಆರೋಗ್ಯ ಇಲಾಖೆಯ ಸಿಬ್ಬಂದಿ ತಮ್ಮ ವ್ಯಾಪ್ತಿಯಲ್ಲಿನ ಈ ಎಲ್ಲ ಸಂಸ್ಥೆಗಳಿಗೆ ಭೇಟಿ ನೀಡಿ, ಖಾಸಗಿ ಉದ್ಯೋಗಿಗಳು 2 ಡೋಸ್ ಲಸಿಕೆ ಪಡೆದು ಕಚೇರಿಗೆ ಹಾಜರಾಗುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸುವಂತೆ ತಿಳಿಸಲಾಗಿದೆ. ಈ ಮೂಲಕ ಕೋವಿಡ್ ನಿಯಂತ್ರಣ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ಸೂಚಿಸಲಾಗಿದೆ.
ಒಂದು ವೇಳೆ ಈ ನಿಯಮಗಳನ್ನು ಪಾಲಿಸದಿದ್ದರೆ ಅಥವಾ ಈ ಕ್ರಮಗಳನ್ನು ಉಲ್ಲಂಘಿಸಿದರೆ ಆ ಉದ್ಯೋಗಿಗಳು/ಆಡಳಿತ ಮಂಡಳಿ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ರ 50ರಿಂದ 60ರವರೆಗೆ, ಐಪಿಸಿ ಸೆಕ್ಷನ್ ಎಲ್ 88 ರ ಅಡಿಯಲ್ಲಿ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಪ್ರಮುಖ ಸುದ್ದಿ :-   ನ್ಯಾಯಾಲಯದ ನಿರ್ದೇಶನ ಪಾಲಿಸಲು ನಿರ್ಲಕ್ಷ್ಯ: ರಾಜ್ಯ ಸರ್ಕಾರದ 41 ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement