ಇಡಿಯಿಂದ ಚಲನಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳ ಬಂಧನ

ನವದೆಹಲಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಹಾಗೂ ಚಲನಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳ್‌ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಇಂದು ಬಂಧಿಸಿದೆ.
ಸಹಕಾರ ಬ್ಯಾಂಕ್‌ನಲ್ಲಿ ಸುಮಾರು 250 ಕೋಟಿ ರೂಪಾಯಿ ವಂಚನೆ ಎಸಗಿದ ಆರೋಪ ಆನಂದ ಅಪ್ಪುಗೋಳ ಅವರ ಮೇಲಿದ್ದು, ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆ(ಪಿಎಂಎಲ್‌ಎ) ಅಡಿ ಜಾರಿ ನಿರ್ದೇಶನಾಲಯವು ಪ್ರಕರಣ ದಾಖಲಿಸಿತ್ತು. ಗ್ರಾಹಕರಿಂದ ಠೇವಣಿಯಾಗಿ ಪಡೆದು ಹಣ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.
ಸಂಗೊಳ್ಳಿ ರಾಯಣ್ಣ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷರಾಗಿದ್ದ ಅಪ್ಪುಗೋಳ ಅವರು ಸಾರ್ವಜನಿಕರ ಠೇವಣಿ ಹಣವನ್ನು ಸಕಾಲಕ್ಕೆ ಪಾವತಿಸದೆ ಗ್ರಾಹಕರಿಗೆ ವಂಚನೆ ಮಾಡಿರುವ ಕುರಿತು ಬೆಳಗಾವಿಯ ಖಡೇಬಜಾರ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಅಪ್ಪುಗೋಳ ಅವರನ್ನು ಬಂಧಿಸಿ ವಿಚಾಣೆ ನಡೆಸಿತ್ತು.

ಸಿಐಡಿ ಡಿವೈಎಸ್‌ಪಿ ಪುರುಷೋತ್ತಮ ನೇತೃತ್ವದ ತಂಡ ಪ್ರಕರಣದ ತನಿಖೆ ನಡೆಸಿ ಬರೋಬ್ಬರಿ 2063 ಪುಟಗಳ ಚಾರ್ಜ್‌ಶೀಟ್‌ ಅನ್ನು ಬೆಳಗಾವಿ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಪ್ರಕರಣದಲ್ಲಿ ಒಟ್ಟು 13 ಜನರು 275 ಕೋಟಿ ರೂ. ಠೇವಣಿ ಹಣ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಮುಖ ಸುದ್ದಿ :-   ಐಟಿ ಅಧಿಕಾರಿಗಳ ದಾಳಿ, ಕಲಬುರಗಿ ರೈಲ್ವೆ ನಿಲ್ದಾಣದ ಬಳಿ ಕಾರಿನಲ್ಲಿದ್ದ 2 ಕೋಟಿ ರೂ. ವಶಕ್ಕೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement