ಬೆಂಗಳೂರು: ರಾಜ್ಯ ಸರ್ಕಾರದಿಂದ ಮತ್ತೊಂದು ಆದೇಶ ಬಂದಿದ್ದು, ಕೋವಿಡ್-19 ಪ್ರಕರಣಗಳ ನಿಯಂತ್ರಣಕ್ಕಾಗಿ ಹೇರಲಾಗಿರುವ ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ.
ವಾರಾಂತ್ಯದ ಕರ್ಫ್ಯೂ ಅವಧಿಯಲ್ಲಿ ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ನಿರ್ಬಂಧಿಸಿ ಆದೇಶಿಸಿದೆ.
ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಶುಕ್ರವಾರ ರಾತ್ರಿ 8ರಿಂದ ಸೋಮವಾರ ಬೆಳಗ್ಗೆ 5 ಗಂಟೆ ವರೆಗೆ (ವಾರಾಂತ್ಯ ಕರ್ಫ್ಯೂ ಜಾರಿ ಅವಧಿಯಲ್ಲಿ) ರಾಜ್ಯಾದ್ಯಂತ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ಸೋಮವಾರದಿಂದ ಶುಕ್ರವಾರದ ರಾತ್ರಿ 10 ಗಂಟೆ ವರೆಗೆ ಮದ್ಯ ಮಾರಾಟಕ್ಕೆ ಅವಕಾಶ ಇದೆ. ಆದರೆ ಈ ಅವಧಿಯಲ್ಲಿ ಮದ್ಯದಂಗಡಿಗಳಲ್ಲಿ ಶೇ. 50 ಗ್ರಾಹಕರಿಗೆ ಮಾತ್ರ ಸೀಮಿತಗೊಳಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಅಲ್ಲದೆ, ಲೈಸೆನ್ಸ್ ಇರುವ ಮದ್ಯ ಮಾರಾಟ ಮಳಿಗೆಗಳು ಸಾಮಾಜಿಕ ಅಂತರವನ್ನು 6 ಅಡಿಗಳಿಗೆ ಕಡಿಮೆ ಇಲ್ಲದಂತೆ ನೋಡಿಕೊಳ್ಳಬೇಕು. ಮಳಿಗೆಗಳಲ್ಲಿ ಕೆಲಸ ಮಾಡುವವರು ಗ್ಲೌಸ್, ಮಾಸ್ಕ್ ಧರಿಸಬೇಕು ಹಾಗೂ ಅಂಗಡಿಗೆ ಬರುವ ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಎಂದು ಸಹ ಸೂಚಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ