ಭಾರತದ ಮತ್ತೊಂದು ಮೈಲಿಗಲ್ಲು: ದೇಶದಲ್ಲಿ 150 ಕೋಟಿಗೂ ಹೆಚ್ಚು ಡೋಸ್ ಕೋವಿಡ್‌ ಲಸಿಕೆ ನೀಡಲಾಗಿದೆ ಎಂದ ಪ್ರಧಾನಿ

ನವದೆಹಲಿ: ದೇಶದಲ್ಲಿ ಈವರೆಗೆ 150 ಕೋಟಿ‌ ಡೋಸ್ ಲಸಿಕೆ ನೀಡಿರುವುದು ಮಹತ್ವದ ಮೈಲುಗಲ್ಲು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಲಸಿಕೆ ನೀಡಿಕೆ ಆರಂಭವಾದ ಒಂದು ವರ್ಷದ ಅವಧಿಯಲ್ಲಿ 150 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಇದು ಆಶಾದಾಯಕ ಬೆಳವಣಿಗೆ ಎಂದು ಅವರು ಹೇಳಿದ್ದಾರೆ.
ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಎರಡನೇ ಕ್ಯಾನ್ಸರ್ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಒಂದು ವರ್ಷದ ಅವಧಿಯಲ್ಲಿ 150 ಕೋಟಿ ಡೋಸ್ ಲಸಿಕೆ ನೀಡಲು ಶ್ರಮಿಸಿದ ವೈದ್ಯರು ,ಆರೋಗ್ಯ ಕಾರ್ಯಕರ್ತರು ಮತ್ತು ದಾದಿಯರಿಗೆ ಅಭಿನಂದನೆಗಳು. 15ರಿಂದ 18 ವರ್ಷ ವಯೋಮಾನದ ಮಕ್ಕಳಿಗೆ ಲಸಿಕೆ ನೀಡಿಕೆ ಆರಂಭವಾದ ಐದು ದಿನಗಳ ಅವಧಿಯಲ್ಲಿ 1.5 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಶೇ.90 ರಷ್ಟು ಮೊದಲ ಡೋಸ್ ಲಸಿಕೆ:
ದೇಶದ ಅರ್ಹ ನಾಗರಿಕರ ಪೈಕಿ ಶೇಕಡ 90 ರಷ್ಟು ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ ಇದರ ಜೊತೆಗೆ ಶೇಕಡ 65ಕ್ಕೂ ಹೆಚ್ಚು ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ 130 ಕೋಟಿ ಜನಸಂಖ್ಯೆ ಇರುವ ಭಾರತದಲ್ಲಿ ಹದಿನೈದು ವರ್ಷ ದಾಟಿದ ಎಲ್ಲಾ ವಯೋಮಾನದವರಿಗೆ ಲಸಿಕೆ ನೀಡುವುದು ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಈ ಪ್ರಮಾಣವನ್ನು ಮತ್ತಷ್ಟು ಹೆಚ್ಚು ಮಾಡುವುದಾಗಿ ಅವರು ಹೇಳಿದ್ದಾರೆ
ದೇಶದಲ್ಲಿ ಆರೋಗ್ಯ ಮೂಲ ಸೌಕರ್ಯ ಹೆಚ್ಚಿಸಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement