ಮಂಡ್ಯ: ಶಾಲೆಗೆ ಮೊಬೈಲ್ ತಂದಿದ್ದ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕಿ ಅಮಾನವೀಯವಾಗಿ ನಡೆದುಕೊಂಡ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಶಾಲೆಗೆ ಮೊಬೈಲ್ ತಂದ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕಿ ಅಸಭ್ಯವಾಗಿ ನಡೆದುಕೊಂಡಿದ್ದು, ವಿದ್ಯಾರ್ಥಿನಿ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ವಾರದ ಹಿಂದೆಯೇ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಯರು ಶಾಲೆಗೆ ಮೊಬೈಲ್ ತೆಗೆದುಕೊಂಡು ಬಂದಿದ್ದ ವಿಚಾರ ತಿಳಿದ ಮುಖ್ಯಶಿಕ್ಷಕಿ ಕೊಠಡಿಗೆ ಕರೆಯಿಸಿ, ಮೊಬೈಲ್ ತಂದಿರುವವರಿಗೆ ಕೊಡಲು ಹೇಳಿದ್ದಾರೆ, ಇಲ್ಲದಿದ್ದರೆ ಬಟ್ಟೆಬಿಚ್ಚಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ.
ಕೆಲ ವಿದ್ಯಾರ್ಥಿನಿಯರ ಬಳಿ ಮೊಬೈಲ್ ಇರುವುದು ತಿಳಿಯುತ್ತಿದ್ದಂತೆ, ಓರ್ವ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿದ್ದಾರೆ. ಮುಖ್ಯ ಶಿಕ್ಷಕಿ ವರ್ತನೆಗೆ ಈಗ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.
ವಿಷಯ ತಿಳಿದು ಶಾಲೆಗೆ ವಿದ್ಯಾರ್ಥಿನಿ ಪೋಷಕರು ಗ್ರಾಮಸ್ಥರ ಜೊತೆಗೆ ಆಗಮಿಸಿದ್ದಾರೆ, ನಂತರ ತಹಶೀಲ್ದಾರ್ ಶ್ವೇತಾ ಅವರ ಬಳಿ ದೂರು ದಾಖಲಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ