ರಾಜ್ಯದಲ್ಲಿ ಒಂದೇ ದಿನ 107 ಓಮಿಕ್ರಾನ್ ಸೋಂಕು ಪತ್ತೆ..!

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವಂತೆ ಕೋವಿಡ್ ರೂಪಾಂತರಿ ಓಮಿಕ್ರಾನ್ ಪ್ರಕರಣಗಳೂ ಹೆಚ್ಚುತ್ತಿವೆ.
ಜನೆವರಿ .6ರಂದು,ಗುರುವಾರ ಒಂದೇ ದಿನ ರಾಜ್ಯದಲ್ಲಿ 107 ಓಮಿಕ್ರಾನ್ ಪ್ರಕರಣಗಳು ದೃಢಪಟ್ಟಿವೆ.
ಈ ಕುರುತು ಟ್ವೀಟ್‌ ಮಾಡಿರುವ ರಾಜ್ಯ ಆರೋಗ್ಯ ಸಚಿವ ಡಾ.ಸುಧಾಕರ, ಈಗ ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 333ಕ್ಕೆ ಹೆಚ್ಚಳವಾಗಿದೆ ಎಂದು ರಾಜ್ಯದ ತಿಳಿಸಿದ್ದಾರೆ.

ರಾಜ್ಯದಲ್ಲಿ ಗುರುವಾರ 5,031 ಮಂದಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ.3.95ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 22,173ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ಬರೋಬ್ಬರಿ 4,324 ಪ್ರಕರಣಗಳು ಪತ್ತೆಯಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 18,913ಕ್ಕೆ ಏರಿಕೆಯಾಗಿದೆ. ಅಷ್ಟೇ ಅಲ್ಲ, ಬೆಂಗಳೂರು ನಗರ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.7.5ಕ್ಕೆ ಏರಿಕೆಯಾಗಿದೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement