ಹುಬ್ಬಳ್ಳಿ: ಹೂಡಿಕೆ ಮಾಡಿದ್ರೆ ಹೆಚ್ಚಿನ ಲಾಭದ ಆಮಿಷವೊಡ್ಡಿ ಉದ್ಯಮಿಗೆ ಬರೋಬ್ಬರಿ 32 ಲಕ್ಷ ರೂ. ಪಂಗನಾಮ..!

ಹುಬ್ಬಳ್ಳಿ: ಹೆಚ್ಚಿನ ಲಾಭದ ಆಮಿಷವೊಡ್ಡಿ ಉದ್ಯಮಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ಪಂಗನಾಮ ಹಾಕಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಉದ್ಯಮಿ ಬರೋಬ್ಬರಿ 32 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾರೆ. ಹುಬ್ಬಳ್ಳಿಯ ಹೆಗ್ಗೇರಿ ಕಾಲೋನಿಯ ಉದ್ಯಮಿ ಗುರುಮೂರ್ತಿ ನಾಣ್ಯದ ಎಂಬವರಿಗೆ ಅಪರಿಚಿತರೊಬ್ಬರು ಪ್ಲಿಪ್‍ಕಾರ್ಟ್ ಕಂಪನಿಯ ಪ್ರಾಜೆಕ್ಟ್‍ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿ 32 ಲಕ್ಷ ವಂಚನೆ ಮಾಡಿದ್ದಾರೆ ಎಂದು ಹುಬ್ಬಳ್ಳಿ – ಧಾರವಾಡ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೂರು ನೀಡಿದ ಉದ್ಯಮಿಗೆ ಅಪರಿಚಿತ ಮಹಿಳೆ ಲಕ್ಷ್ಮೀ ಮೆಹರ್ ಎಂಬ ಹೆಸರಿನಲ್ಲಿ ಪರಿಚಯಿಸಿಕೊಂಡಿದ್ದು, ಪ್ಲಿಪ್‍ಕಾರ್ಟ್ ಕಂಪನಿಯ ಪ್ರಾಜೆಕ್ಟ್‌ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚುನ ಲಾಭ ಪಡೆಯಬಹುದು ಎಂದು ನಂಬಿಸಿದ್ದಾರೆ, ಅಲ್ಲದೆ, ಹೆಚ್ಚಿನ ಲಾಭ ನೀಡುವುದಾಗಿ ವಿವಿಧ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಒಟ್ಟು 32 ಲಕ್ಷ ರೂ.ಗಳನ್ನು ಆನ್‍ಲೈನ್ ಮೂಲಕ ತನ್ನ ಖಾತೆಗೆ ವರ್ಗಾವಣೆ ಮಾಡಿಕೊಂಡು ಮೋಸ ಮಾಡಿದ್ದಾರೆ. ಅಲ್ಲದೇ ಪದೇ ಪದೇ ಹಣ ಹಾಕು ಎಂದು ಒತ್ತಾಯಿಸಿದ ನಂತರ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ.

ಪ್ರಮುಖ ಸುದ್ದಿ :-   ನ್ಯಾಯಾಲಯದ ನಿರ್ದೇಶನ ಪಾಲಿಸಲು ನಿರ್ಲಕ್ಷ್ಯ: ರಾಜ್ಯ ಸರ್ಕಾರದ 41 ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement