ಕರ್ನಾಟಕದ ಕೊವಿಡ್ ವಾರ್ ರೂಂ ಮುಖ್ಯಸ್ಥ ಐಎಎಸ್ ಅಧಿಕಾರಿ ಮೌದ್ಗಿಲ್​ಗೆ ರಾಷ್ಟ್ರ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಕೂಡ ಡಿಜಿಟಲ್ ಕ್ಷೇತ್ರದಲ್ಲಿ ಕ್ರಾಂತಿ ಮಾಡುತ್ತಿದ್ದು, ಕರ್ನಾಟಕ ಕೊವಿಡ್ ವಾರ್ ರೂಮ್ ಮುಖ್ಯಸ್ಥರಾದ ಮನೀಶ್ ಮೌದ್ಗಿಲ್ ಮತ್ತು ಅವರ ತಂಡವು ಕೋವಿಡ್ ನಿರ್ವಹಣೆಯಲ್ಲಿ ತಂತ್ರಜ್ಞಾನ, ಡಿಜಿಟಲೀಕರಣವನ್ನು ಬಳಸಿದ್ದಕ್ಕಾಗಿ ರಾಷ್ಟ್ರ ಪ್ರಶಸ್ತಿಗೆ ಭಾಜನವಾಗಿದೆ.

ಭಾರತ ಸರ್ಕಾರದ ಇ-ಆಡಳಿತ ಪ್ರಶಸ್ತಿ ಐಎಎಸ್​ ಅಧಿಕಾರಿ ಮನೀಶ್ ಮೌದ್ಗಿಲ್ ಪಾತ್ರರಾಗಿದ್ದಾರೆ. ಶುಕ್ರವಾರ ಹೈದರಾಬಾದ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಪ್ರಶಸ್ತಿಯನ್ನು ವಿತರಿಸಿದ್ದಾರೆ.
ಸಾಂಕ್ರಾಮಿಕ ರೋಗವನ್ನು ನಿರ್ವಹಿಸುವಲ್ಲಿ ಮಾಹಿತಿ, ಸಂವಹನ ಮತ್ತು ತಂತ್ರಜ್ಞಾನ (ಐಸಿಟಿ) ಬಳಕೆಗಾಗಿ ಕರ್ನಾಟಕದ ಕೊವಿಡ್ -19 ವಾರ್ ರೂಮ್‌ಗೆ ಕೇಂದ್ರದ ಇ-ಆಡಳಿತ ಪ್ರಶಸ್ತಿಯನ್ನು ನೀಡಲಾಗಿದೆ. ಕರ್ನಾಟಕ ರಾಜ್ಯ ಕೊವಿಡ್ -19 ವಾರ್ ರೂಮ್‌ನ ಹಿಂದಿನ ಮೆದುಳಾಗಿರುವ ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರು ಪ್ರಶಸ್ತಿ ಸ್ವೀಕರಿಸಿದರು.

ಐಎಎಸ್​ ಮೌನೀಶ್ ಮೌದ್ಗಿಲ್ ತಂತ್ರಜ್ಞಾನವನ್ನು ಆಡಳಿತದಲ್ಲಿ ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಈ ಹಿಂದೆಯೂ ನಾನಾ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಈ ಹಿಂದೆ ಕೊರೊನಾ ದೇಶಾದ್ಯಂತ ಹರಡಿ ಮೊದಲ ಬಾರಿಗೆ ಲಾಕ್​ಡೌನ್ ಆದ ಸಂದರ್ಭದಲ್ಲಿ ಕ್ವಾರಂಟೈನ್​ಗೆ ಒಳಗಾದ ವ್ಯಕ್ತಿಗಳು ಹೊರಗೆ ಓಡಾಡುವುದನ್ನು ಪತ್ತೆಹಚ್ಚಲು ಐಎಎಸ್​ ಅಧಿಕಾರಿ ಮನೀಶ್ ಮೌದ್ಗಿಲ್ ಮೊಬೈಲ್ ಆ್ಯಪ್ ಒಂದನ್ನು ಅಭಿವೃದ್ಧಿ ಪಡಿಸಿದ್ದಾರೆ.
ಕರ್ನಾಟಕದ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಕೂಡ ಕೊವಿಡ್ ರೂಂ ನಿರ್ವಹಣೆಯಲ್ಲಿ ಸಮಪರ್ಕವಾಗಿ ತಂತ್ರಜ್ಞಾನವನ್ನು ಅಳವಡಿಸಿಕೊಂಡು, ಕೇಂದ್ರ ಸರ್ಕಾರದ ಇ-ಆಡಳಿತ ಪ್ರಶಸ್ತಿ ಪಡೆದಿರುವ ಮನೀಶ್ ಮೌದ್ಗಿಲ್ ತಂಡಕ್ಕೆ ಅಭಿನಂದಿಸಿದ್ದಾರೆ.

ಪ್ರಮುಖ ಸುದ್ದಿ :-   ಶಿರಸಿ ಶಾಸಕ ಭೀಮಣ್ಣ ನಾಯ್ಕ ಮೇಲೆ ಜೇನು ದಾಳಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement