ಮೇಕೆದಾಟು ಪಾದಯಾತ್ರೆ: ಡಿಕೆಶಿ ಮನೆಯಲ್ಲಿ ಕಾಂಗ್ರೆಸ್ ಶಾಸಕರ ಸಭೆ

ಬೆಂಗಳೂರು: ಕರ್ನಾಟಕದಲ್ಲಿ ಮಹಾಮಾರಿ ಕೊರೊನಾ ಹೆಚ್ಚುತ್ತಿದ್ದರೂ ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ತನ್ನ ಮೇಕೆದಾಟು ಪಾದಯಾತ್ರೆಯನ್ನು ಮುಂದುವರಿಸಲು ನಿರ್ಧರಿಸಿದೆ. ಪಾದಯಾತ್ರೆಗೆ ವೇದಿಕೆ ಸಿದ್ಧಪಡಿಸಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕನಕಪುರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿ ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ಈಗಾಗಲೇ ಸರ್ಕಾರ ವಾರಾಂತ್ಯದ ಕರ್ಫ್ಯೂ ವಿಧಿಸಿದ್ದು, ಭಾನುವಾರದಿಂದಲೇ ಪಾದಯಾತ್ರೆ ಕೂಡ ಆರಂಭವಾಗಲಿದೆ ಎಂದು ಕಾಂಗ್ರೆಸ್‌ ತಿಳಿಸಿದೆ. ಸರ್ಕಾರದ ನಿರ್ಬಂಧಗಳ ಹೊರತಾಗಿಯೂ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್, ಈ ನಿರ್ಬಂಧಗಳನ್ನು ಯಾವ ರೀತಿ ಎದುರಿಸುವುದು ಎಂಬುದರ ಕುರಿತು ಸಭೆಯಲ್ಲಿ ಕಾರ್ಯತಂತ್ರ ರೂಪಿಸಲಿದೆ ಎಂದು ತಿಳಿದುಬಂದಿದೆ.

ವಾರಾಂತ್ಯದ ಕರ್ಫ್ಯೂ ಹಿಂತೆಗೆದುಕೊಳ್ಳುವಂತೆ ನಾನು ಈಗಾಗಲೇ ಮುಖ್ಯಮಂತ್ರಿಗಳಿಗ ಪತ್ರ ಬರೆದಿದ್ದೆ, ಆದರೆ ಜಿಲ್ಲಾಧಿಕಾರಿ ಮೂಲಕ ಪ್ರತಿಕ್ರಿಯಿಸಿ ಪಾದಯಾತ್ರೆಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ, ಪಾದಯಾತ್ರೆಯಲ್ಲಿ ಸಾವಿರಾರು ಜನರು ಭಾಗವಹಿಸಲಿದ್ದರು.
ಆದರೆ, ಸರ್ಕಾರ ನಿರ್ಬಂಧ ಹಿನ್ನೆಲೆಯಲ್ಲಿ ಮೇಕೆದಾಟು ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ನಾನು ಮತ್ತು ಸಿದ್ದರಾಮಯ್ಯ ಇಬ್ಬರೇ ಪಾದಯಾತ್ರೆ ನಡೆಸಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ನಾವು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆಂದು ರಾಮನಗರ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಅವರು ತಿಳಿಸಿದ್ದಾರೆ

ಪ್ರಮುಖ ಸುದ್ದಿ :-   ಕೆಪಿಎಸ್‌ಸಿ ಹಗರಣ; ಐಎಎಸ್‌ ಅಧಿಕಾರಿ ಜ್ಞಾನೇಂದ್ರಕುಮಾರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸರ್ಕಾರದ ಅನುಮತಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement