ಸರ್ಕಾರ ಏನೇ ಮಾಡಿದ್ರೂ ನಮ್ಮ ಪಾದಯಾತ್ರೆ ಮಾತ್ರ ನಿಲ್ಲುವುದಿಲ್ಲ : ಸಿದ್ದರಾಮಯ್ಯ

ಬೆಂಗಳೂರು: ರಾಮನಗರ ಜಿಲ್ಲೆಗೆ ಸೀಮಿತವಾಗಿ ಸರ್ಕಾರ 144 ಸೆಕ್ಷನ್ ಹೇರಿರುವುದು ಹೇಗಾದರೂ ಮಾಡಿ ನಮ್ಮ ಪಾದಯಾತ್ರೆ ನಿಲ್ಲಿಸಬೇಕು ಎಂಬ ದುರುದ್ದೇಶ ತೋರಿಸುತ್ತದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ತಮ್ಮ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾವು ನಾಳೆ, ಭಾನುವಾರ ಪಾದಯಾತ್ರೆ ಮಾಡುವುದು ನಿಶ್ಚಿತ, ಈ ಸರ್ಕಾರ ನಮ್ಮ ಮೇಲೆ ಏನು ಕ್ರಮ ಕೈಗೊಳ್ಳುತ್ತದೆಯೋ ಕೈಗೊಳ್ಳಲಿ. ನಾವು ಎಲ್ಲವನ್ನೂ ಎದುರಿಸಲು ಸಿದ್ಧರಿದ್ದೇವೆ ಎಂದು ತಿಳಿಸಿದರು.
ನಾವು ಕೊರೊನಾ ನಿಯಮಗಳನ್ನು ಅನುಸರಿಸಿಯೇ ಪಾದಯಾತ್ರೆ ಮಾಡುತ್ತೇವೆ. ನಮ್ಮ ಮೇಲೆ ಏನು ಕಾನೂನು ಕ್ರಮ ತೆಗೆದುಕೊಳ್ಳಬೇಕು ಅದನ್ನು ಸರ್ಕಾರ ಮಾಡಲಿ. ನಾವು ಕಾನೂನನ್ನು ಗೌರವಿಸುತ್ತೇವೆ, ಆದರೂ ಅವರು ನಮ್ಮನ್ನು ಬಂಧಿಸುವುದಿದ್ದರೆ ಬಂಧಿಸಲಿ ಎಂದು ಹೇಳಿದರು.
ಮೇಕೆದಾಟು ಬಳಿ 144 ಸೆಕ್ಷನ್ ಜಾರಿ ಇದೆಯೋ ಇಲ್ಲವೋ ನನಗೆ ಗೊತ್ತಿಲ್ಲ. ಹಾಗೇನಾದರೂ ಜಾರಿ ಮಾಡಿದ್ದರೆ ನಾಲ್ಕೇ ಜನ ಪಾದಯಾತ್ರೆ ಮಾಡ್ತೇವೆ. ನಮ್ಮ ಪಾದಯಾತ್ರೆ ಘೋಷಣೆಯಾಗಿ ಎರಡು ತಿಂಗಳಾಯ್ತು. ವಾರಾಂತ್ಯದ ಲಾಕ್ ಡೌನ್ ಘೋಷಣೆ ಆಗಿದ್ದು ಮೊನ್ನೆ ಮೊನ್ನೆ. ಅದೂ ಅಲ್ಲದೆ ರಾಮನಗರ ಜಿಲ್ಲೆಯಲ್ಲಿ ಮಾತ್ರ 144 ಸೆಕ್ಷನ್ ಯಾಕೆ? ಬೇರೆ ಜಿಲ್ಲೆಯಲ್ಲಿ ಏಕಿಲ್ಲ ಎಂದು ಪ್ರಶ್ನಿಸಿದ ಅವರು
ಇದು ಏನಾದರೂ ಮಾಡಿ ಪಾದಯಾತ್ರೆ ತಡೆಯಬೇಕು ಎಂಬ ಅವರ ದುರುದ್ದೇಶವನ್ನು ತೋರಿಸುತ್ತದೆ. ರಾಮನಗರದಲ್ಲಿ ಗೆಸ್ಟ್ ಹೌಸ್‍ಗಳು ಸಿಗದಂತೆ ನಿರ್ಬಂಧ ಹೇರಲಾಗಿದೆ ಎಂದರು.

ಪ್ರಮುಖ ಸುದ್ದಿ :-   ಏಪ್ರಿಲ್‌ 20ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ, ಎರಡು ಚುನಾವಣಾ ಸಮಾವೇಶದಲ್ಲಿ ಭಾಗಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement