15-18 ವಯಸ್ಸಿನ 2 ಕೋಟಿ ಮಕ್ಕಳಿಗೆ ಮೊದಲ ಡೋಸ್‌ ಲಸಿಕೆ ನೀಡಲಾಗಿದೆ: ಸಚಿವ ಮಾಂಡವಿಯಾ

ನವದೆಹಲಿ: ಮಕ್ಕಳಿಗಾಗಿ ಆರಂಭಿಸಿದ ಕೊರೊನಾ ಲಸಿಕಾಕರಣ ಅಭಿಯಾನದಲ್ಲಿ ಒಂದು ವಾರದೊಳಗೆ 15-18 ವಯಸ್ಸಿನ 2 ಕೋಟಿ ಮಕ್ಕಳು ಮೊದಲ ಡೋಸ್‌ ಲಸಿಕೆ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌‌ಸುಖ್‌ ಮಾಂಡವಿಯಾ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಇದು ಒಳ್ಳೆಯ ಬೆಳವಣಿಗೆ. 15-18 ವರ್ಷದೊಳಗಿನ 2 ಕೋಟಿಗೂ ಅಧಿಕ ಮಕ್ಕಳು ತಮ್ಮ ಮೊದಲ ಡೋಸ್‌‌ ಕೊರೊನಾ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಮಕ್ಕಳಿಗೆ ಲಸಿಕೆ ಹಾಕುವ ಅಭಿಯಾನ ಪ್ರಾರಂಭಗೊಂಡ ಒಂದು ವಾರದೊಳಗೆ ಇದು ಸಾಧ್ಯವಾಗಿದೆ” ಎಂದು ಬರೆದಿದ್ದಾರೆ.
ಶನಿವಾರ ಬೆಳಗ್ಗೆ 7 ಗಂಟೆ ವರೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 90,59,360 ಮಂದಿಗೆ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ. ದೇಶದಲ್ಲಿ ಒಟ್ಟು 150.61 ಕೋಟಿಗೂ ಹೆಚ್ಚು ಮಂದಿಗೆ ಲಸಿಕೆ ನೀಡಲಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ