ಬಿಜೆಪಿ ನಾಯಕ ವರುಣ್ ಗಾಂಧಿಗೆ ಕೋವಿಡ್ ಸೋಂಕು

ನವದೆಹಲಿ: ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ.
ಈ ಕುರಿತು ಟ್ವೀಟ್‌ ಮೂಲಕ ಮಾಹಿತಿ ನೀಡಿರುವ ವರುಣ ಗಾಂಧಿ ತನಗೆ”ಬಲವಾದ ರೋಗಲಕ್ಷಣಗಳಿವೆ ಎಂದು ತಿಳಿಸಿದ್ದಾರೆ. ಐದು ಪ್ರಮುಖ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವಾಗ ದೇಶದಲ್ಲಿ ಕೋವಿಡ್ ಪ್ರಕರಣಗಳ ಚಕಿತಗೊಳಿಸುವ ಉಲ್ಬಣದ ಬಗ್ಗೆ ಬಿಜೆಪಿ ನಾಯಕ ಕಳವಳ ವ್ಯಕ್ತಪಡಿಸಿದರು.
ನಾವೀಗ ಮೂರನೇ ಅಲೆ ಮತ್ತು ಚುನಾವಣಾ ಪ್ರಚಾರದ ಮಧ್ಯದಲ್ಲಿದ್ದೇವೆ. ಚುನಾವಣಾ ಆಯೋಗವು ಅಭ್ಯರ್ಥಿಗಳು ಮತ್ತು ರಾಜಕೀಯ ಕಾರ್ಯಕರ್ತರಿಗೂ ಮುನ್ನೆಚ್ಚರಿಕೆ ಡೋಸನ್ನು ವಿಸ್ತರಿಸಬೇಕು ಎಂದು ವರುಣ್ ಗಾಂಧಿ ಹೇಳಿದರು.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಅಧಿಕಾರಿಯನ್ನು ಕಚೇರಿಯಿಂದ ಹೊರಗೆಳೆದು ಥಳಿತ, ಮುಖಕ್ಕೆ ಒದ್ದು ಹಲ್ಲೆ : ಮೂವರ ಬಂಧನ-ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನಿಮ್ಮ ಕಾಮೆಂಟ್ ಬರೆಯಿರಿ

advertisement