ಕನಕಪುರ: ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ ಆರಂಭ, ನಗಾರಿ ಬಾರಿಸುವ ಮೂಲಕ ಚಾಲನೆ

ಕನಕಪುರ: ಮೇಕೆದಾಟು ಯೋಜನೆ ಕಾಮಗಾರಿ ಶೀಘ್ರ ಕಾಮಗಾರಿ ಆರಂಭಕ್ಕೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿದೆ.
ಸ್ವಾಮೀಜಿಗಳು, ಮೌಲ್ವಿ ಮತ್ತು ಪಾದ್ರಿಗಳು ಮೂರೂ ಧರ್ಮಗಳ ಧಾರ್ಮಿಕ ಮುಖಂಡರು ಗಿಡಗಳಿಗೆ ನೀರೆರೆಯುವ ಮೂಲಕ ನಗಾರಿ ಬಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಯಿತು.
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ, ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸಂಸದ ಡಿ.ಕೆ. ಸುರೇಶ ನೇತೃತ್ವದಲ್ಲಿ ಪಾದಯಾತ್ರೆ ಆರಂಭವಾಗಿದ್ದು ಕಾಂಗ್ರೆಸ್ ನ ಹಲವಾರು ನಾಯಕರು ಭಾಗವಹಿಸಿದ್ದಾರೆ.

ವಾರಾಂತ್ಯ ಕರ್ಫ್ಯೂ ಮಧ್ಯೆ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನಲ್ಲಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಸಾರಥ್ಯದಲ್ಲಿ ಮೇಕೆದಾಟು ಪಾದಯಾತ್ರೆ ನಡೆಯುತ್ತಿದೆ. ಕಾಂಗ್ರೆಸ್‌ ನಾಯಕರು ಮೊದಲ ದಿನ 15 ಕಿಲೋ ಮೀಟರ್ ಪಾದಯಾತ್ರೆ ಮಾಡಲಿದ್ದು, ಸಂಗಮದಿಂದ ದೊಡ್ಡ ಆಲಹಳ್ಳಿಯವರೆಗೂ ಈ ಪಾದಯಾತ್ರೆ ನಡೆಯಲಿದೆ. ಜನವರಿ 18ರವರೆಗೆ ಪಾದಯಾತ್ರೆ ನಡೆಯಲಿದೆ. ನಮ್ಮ ನೀರು ನಮ್ಮ ಹಕ್ಕು ಘೋಷ ವಾಕ್ಯದೊಂದಿಗೆ ಮೇಕೆದಾಟು ಪಾದಯಾತ್ರೆ ಆರಂಭಿಸಿದ್ದು, ಸಂಜೆಯ ವೇಳೆಗೆ ಕನಕಪುರ ತಲುಪಲಿದ್ದಾರೆ.
ಈ ಸಂದರ್ಭದಲ್ಲಿ ಎಲ್ಲರೂ ಹಸಿರು ಶಾಲನ್ನು ಕೈಯೆತ್ತಿ ಬೀಸುತ್ತಾ ರೈತರಿಗಾಗಿ, ನೀರಿಗಾಗಿ ನಮ್ಮ ಹೋರಾಟ ಎಂದು ಹೇಳುತ್ತಿದ್ದರು.

ಪಾದಯಾತ್ರೆಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ,‌ ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌‌ ಶಿವಕುಮಾರ್, ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ಹೆಚ್.ಕೆ. ಪಾಟೀಲ್, ಎಂ.ಬಿ. ಪಾಟೀಲ್,‌ ಜಿ. ಪರಮೇಶ್ವರ್, ಹೆಚ್.ಎಂ.ರೇವಣ್ಣ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ವೀರಪ್ಪ ಮೊಯ್ಲಿ, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು​ ಸೇರಿದಂತೆ ಕಾಂಗ್ರೆಸ್​​ನ ಬಹುತೇಕ ಶಾಸಕರು ಹಾಗೂ ಕೆಪಿಸಿಸಿ ಪದಾಧಿಕಾರಿಗಳು ಭಾಗಿಯಾಗಿದ್ದಾರೆ. ನಟ ದುನಿಯಾ ವಿಜಯ್, ಸಾಧುಕೋಕಿಲ ಸೇರಿ ಹಲವು ನಾಯಕರು, ಹಾಗೂ ಮರಳೆಗವಿಮಠದ ಸ್ವಾಮೀಜಿ, ಆದಿಚುಂಚನಗಿರಿ ‌ಶಾಖಾ ಮಠದ ಕಿರಿಯ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಸಾಥ್​ ನೀಡಿದ್ದಾರೆ.
ಕನಕಪುರದಿಂದ ಬೆಂಗಳೂರಿಗೆ ಪಾದಯಾತ್ರೆ: ಮೇಕೆದಾಟು ಜಲಾಶಯ ನಿರ್ಮಾಣದಿಂದ ಸಮದ್ರಕ್ಕೆ ಹರಿದು ವ್ಯರ್ಥವಾಗಿ ಹೋಗುವ ಕಾವೇರಿ ನೀರನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು. ಅದಕ್ಕಾಗಿಯೇ ಈ ಐತಿಹಾಸಿಕ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಹೇಳುತ್ತಿದ್ದು,ರೆ. ಕನಕಪುರದಿಂದ ಬೆಂಗಳೂರಿಗೆ 11 ದಿನಗಳ ಪಾದಯಾತ್ರೆ ಜನವರಿ 19ರ ವರೆಗೆ ನಡೆಯಲಿದೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement