ಮೇಕೆದಾಟು ಪಾದಯಾತ್ರೆಯಲ್ಲಿ ಆಯಾಸಗೊಂಡ ಸಿದ್ದರಾಮಯ್ಯ: ಕಾರನ್ನೇರಿ ವಾಪಸ್‌

ರಾಮನಗರ: ಮೇಕೆದಾಟು ಪಾದಯಾತ್ರೆಯ ಪಾಲ್ಗೊಂಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಲ್ಕು ಕಿಮೀ ನಡೆದ ನಂತರ ಆಯಾಸಗೊಂಡು ಬೇರೊಂದು ಕಾರಿನಲ್ಲಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ ಎಂದು ವರದಿಯಾಗಿದೆ.
73 ವರ್ಷ ವಯಸ್ಸಿನ ಸಿದ್ದರಾಮಯ್ಯ ಮೇಕೆದಾಟು ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಕಾಂಗ್ರೆಸ್ಸಿನ ಮೇಕೆದಾಟು ಪಾದಯಾತ್ರೆ ನೇತೃತ್ವ ವಹಿಸಿದ್ದರು. ಜನವರಿ 18ರ ವರೆಗೆ ನಡೆಯುವ ಈ ಪಾದಯಾತ್ರೆಗೆ ಇಂದು ಕನಕಪುರ ತಾಲ್ಲೂಕಿನ ಕಾವೇರಿ ತಟ, ಸಂಗಮದಲ್ಲಿ ಚಾಲನೆ ನೀಡಲಾಯಿತು. ಕೋವಿಡ್‌ ಕಾರಣ ಸರ್ಕಾರ ವಾರಾಂತ್ಯದ ಕರ್ಫ್ಯೂ ಇದ್ದರು ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಕೆದಾಟು ಪಾದಯಾತ್ರೆಯ ನೇತೃತ್ವ ವಹಿಸಿದ್ದರು. ಇಂದು ಪಾದಯಾತ್ರೆ ಮೂಲಕ ಕನಕಪುರ ತಲುಪಲು ಯೋಜನೆ

ಹಾಕಿಕೊಳ್ಳಲಾಗಿತ್ತು. ಆದರೆ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯ ನಾಲ್ಕು ಕಿ.ಮೀ. ನಡೆದ ನಂತರ ಆಯಾಸಗೊಂಡಿದ್ದಾರೆ. ಸುಸ್ತಾಗಿ ಕುಳಿತ ಅವರನ್ನು ಕಾರಿನಲ್ಲಿ ವಾಪಸ್‌ ಕರೆದುಕೊಂಡು ಹೋಗಲಾಯಿತು. ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗಿದೆ.  .ವಿಪಕ್ಷ ನಾಯಕ ಸಿದ್ದರಾಮಯ್ಯ ಜ್ವರದಿಂದ ಬಳಲುತ್ತಿದ್ದಾರೆ. ನನಗೆ  ಕಳವಳವಾಗುತ್ತಿದೆ. ಸಿದ್ದರಾಮಯ್ಯನವರೇ ದಯವಿಟ್ಟು ವಿಶ್ರಾಂತಿ ತೆಗೆದುಕೊಳ್ಳಿ. ನಿಮ್ಮ ಆರೋಗ್ಯ ರಕ್ಷಣೆ ಮಹತ್ವ  ಎಂದು  ಸಚಿವ ಕಾರಜೋಳ ಟ್ವೀಟ್ ಮಾಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement